ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸಮಾಜದ ಬುನಾದಿಯಾಗಿರುವ ಕಾರ್ಮಿಕರ ಬದುಕು ಹಸನಾಗಬೇಕಿದ್ದು, ಇದಕ್ಕಾಗಿ ಅವರುಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಕರೆ ನೀಡಿದ್ದಾರೆ.
ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್, ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಮಿಕರ ದಿನಾಚರಣೆ ಹಾಗೂ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಜೀವಿಗಳಾದ ಕಾರ್ಮಿಕರ ಸಂಕಷ್ಟಗಳಿಗೆ ಪೂರಕವಾಗಿ ಸ್ಪಂದಿಸುತ್ತಿವೆ. ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿವೆ. ಈ ಯೋಜನೆಗಳ ಕುರಿತು ಮಾಹಿತಿ ಹೊಂದುವ ಜೊತೆಗೆ ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಬಿಳಕಿ ಮಠದ ಶ್ರೀ ರಾಚೋಟೇಶ್ವರ ಸ್ವಾಮೀಜಿ ಮಾತನಾಡಿ, ಕಾರ್ಮಿಕರಿಲ್ಲದ ಸಮಾಜ ಕಲ್ಪಿಸಿಕೊಳ್ಳುವುದು ಅಸಾಧ್ಯವಾಗಿದ್ದು, ಪ್ರತಿಯೊಂದು ಕೆಲಸದ ಹಿಂದೆ ಕಾರ್ಮಿಕರ ಶ್ರಮವಿದೆ. ಕಾರ್ಮಿಕರು ಶ್ರಮ ಜೀವಿಗಳಾಗಿದ್ದು, ಧರ್ಮ, ಜಾತಿ, ಪಂಥಗಳನ್ನು ಮೀರಿದವರು. ಇವರನ್ನು ಒಂದಲ್ಲ ಒಂದು ರೀತಿಯಲ್ಲಿ ಪ್ರತಿಯೊಬ್ಬರು ಅವಲಂಬಿಸಿಕೊಂಡಿದ್ದಾರೆ. ಇಂತಹ ಕಾರ್ಮಿಕರ ಬದುಕು ಸಹ ಉತ್ತಮಗೊಳ್ಳಬೇಕು. ಇವರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕು. ಆಗ ಮಾತ್ರ ನಿಮ್ಮ ಶ್ರಮ ಸಾರ್ಥಕಗೊಳ್ಳುತ್ತದೆ ಎಂದರು.
ಶಾಸಕ ಬಿ.ಕೆ. ಸಂಗಮೇಶ್ವರ್, ಕೆಎಸ್ಸಿಡಬ್ಲ್ಯೂಸಿಯು ತಾಲೂಕು ಅಧ್ಯಕ್ಷ ಕೆ. ಚಂದ್ರಶೇಖರ್, ಗೌರವಾಧ್ಯಕ್ಷ ಜಿ. ಸುರೇಶ್ ಕುಮಾರ್, ಶಿವಮೊಗ್ಗ ಶಾಖೆಯ ಗೌರವ ಸಲಹೆಗಾರ ಎಂ. ಭೂಪಾಲ್, ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಗೌರವ ಸಲಹೆಗಾರ ಬಿ.ಕೆ. ಶ್ರೀನಾಥ್, ಉದ್ಯಮಿ ಎ. ಮಾಧು, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ. ಮೋಹನ್, ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ಸಂಜಯ ಕುಮಾರ್, ಬಾಬು, ವಿಶ್ವನಾಥ್, ಸುಬ್ರಮಣಿ, ಲಕ್ಷ್ಮಣ್, ಸುಪ್ರಿಯ, ಎನ್. ಕುಮಾರ್, ಮನೋಹರ್, ಸುಂದರ್ ಬಾಬು, ಶಿಕಾರಿಪುರ, ಶಿರಾಳಕೊಪ್ಪ, ಹೊಸನಗರ, ಆನವಟ್ಟಿ, ಸೊರಬ, ತಾಳಗೊಪ್ಪ, ಸಾಗರ, ತೀರ್ಥಹಳ್ಳಿ ಮತ್ತು ಹೊಳೆಹೊನ್ನೂರು ಹೋಬಳಿ ಶಾಖೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
Also read: ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಏಳು ಸಾವು, 11 ಮಂದಿಗೆ ಗಂಭೀರ ಗಾಯ
ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಎಸ್ಸಿಡಬ್ಲ್ಯೂಸಿಯು ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post