ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನವನ್ನು ಕೋವಿಡ್ ರೋಗಿಗಳಿಗೆ ಬನ್, ಹಣ್ಣು ವಿತರಣೆ ಮಾಡುವ ಮೂಲಕ ಯುವ ಕಾಂಗ್ರೆಸ್ ಅರ್ಥಪೂರ್ಣವಾಗಿ ಆಚರಿಸಿತು.
ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ರೋಗಿಗಳಿಗೆ ಯುವ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಬನ್ ಹಾಗೂ ಹಣ್ಣು ವಿತರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಯುವ ಕಾಂಗ್ರೆಸ್ ಭದ್ರಾವತಿ(ಗ್ರಾ) ಬ್ಲಾಕ್ ಅಧ್ಯಕ್ಷ ಅಫ್ತಾಬ್ ಅಹ್ಮದ್ ಹಾಗೂ ಉಪಾಧ್ಯಕ್ಷರಾದ ಕಲ್ಪನಹಳ್ಳಿ ಪ್ರವೀಣ್, ತಬ್ರೆಜ್ ಖಾನ್ ಸಜ್ಜಾದ್, ಫೈಸಲ್ ಅಭಿ, ವಾಹೀದ್ ಖಾನ್ ತೇಜಸ್ ನಗರಸಭೆ ನೂತನ ಸದಸ್ಯ ಶ್ರೇಯಸ್(ಚಿಟ್ಟೆ) ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post