ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗು ಸೇವನೆ ಹೆಚ್ಚಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪೊಲೀಸ್ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಿನಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗು ಸೇವನೆ ಹೆಚ್ಚಾಗುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಯುವ ಸಮುದಾಯದವರು ದಾರಿ ತಪ್ಪುತ್ತಿದ್ದು, ಮಾದಕ ವಸ್ತುಗಳನ್ನು ಮಾರಾಟ ಮಾಡುವವರನ್ನು ಯಾರು ಸಹ ಪ್ರಶ್ನಿಸದಂತಹ ವಾತಾವರಣ ನಿರ್ಮಾಣವಾಗುತ್ತಿದೆ. ಜೊತೆಗೆ ಮಾರಾಕಾಸ್ತ್ರಗಳ ಬಳಕೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಎನ್. ಅಫ್ತಾಬ್ ಅಹಮದ್, ಉಪಾಧ್ಯಕ್ಷ ತಬ್ರೇಜ್ ಖಾನ್, ಪ್ರಧಾನ ಕಾರ್ಯದರ್ಶಿ ಸಜ್ಜಾದ್, ಅಮೋಸ್, ಜಬಿವುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post