ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಚುನಾವಣೆಗಳಿಗೆ ಈಗಾಗಲೇ ಚುನಾವಣಾ ಆಯೋಗ ಸಿದ್ದತೆ ಕೈಗೊಳ್ಳುತ್ತಿದ್ದು, ಕ್ಷೇತ್ರಗಳ ರಚನೆಗೆ ಸಂಬಂಧಿಸಿದಂತೆ ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ. ಈ ಪ್ರಕಾರ ತಾಲೂಕು ಪಂಚಾಯಿತಿ 5 ಕ್ಷೇತ್ರಗಳು ಕಡಿತಗೊಂಡಿವೆ.
ತಾಲೂಕು ಪಂಚಾಯಿತಿ ಒಟ್ಟು 19 ಕ್ಷೇತ್ರಗಳನ್ನು ಒಳಗೊಂಡಿದ್ದು, ಸರ್ಕಾರ ಹೊಳೆಹೊನ್ನೂರನ್ನು ಪಟ್ಟಣವನ್ನಾಗಿ ಮೇಲ್ದರ್ಜೆಗೇರಿಸಿರುವ ಹಿನ್ನಲೆಯಲ್ಲಿ 5 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ಕೈಬಿಟ್ಟು 14 ಕ್ಷೇತ್ರಗಳನ್ನು ನಿಗದಿಪಡಿಸಲಾಗಿದೆ. ಉಳಿದಂತೆ ತಾಲೂಕಿನಲ್ಲಿ ಆನವೇರಿ, ಹೊಳೆಹೊನ್ನೂರು, ಕೂಡ್ಲಿಗೆರೆ, ಹಿರಿಯೂರು ಮತ್ತು ಸಿಂಗನಮನೆ ಸೇರಿದಂತೆ ಒಟ್ಟು 5 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿದ್ದು, ಈ ಕ್ಷೇತ್ರಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post