ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಹಳೇವಿದ್ಯಾರ್ಥಿಗಳ ಸಂಘ ಮತ್ತು ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರದ ಸಹಯೋಗದೊಂದಿಗೆ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮದಡಿ ಟಿ.ಬಿ ಸೋಲಿಸಿ, ಕರ್ನಾಟಕ ಗೆಲ್ಲಿಸಿ ಅಭಿಯಾನದ ಅಂಗವಾಗಿ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ವಹಿಸಿದ್ದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಗೌಡ ಹಾಗು ಆರೋಗ್ಯ ಇಲಾಖೆ ಸಿಬ್ಬಂದಿಗಳು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರಜ್ವಲ್ ನೇತೃತ್ವದ ತಂಡ ಪ್ರಥಮ ಬಹುಮಾನ ಪಡೆದುಕೊಂಡಿತು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post