ಭದ್ರಾವತಿ: ತಾಲೂಕಿನ ಹಂಚಿನ ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಪ.ಜಾ) ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಪರೀಕ್ಷೆ ಬರೆದ ಒಟ್ಟು 46 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರೆ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ. ವಿದ್ಯಾರ್ಥಿನಿ ಯರಾದ ಎಂ.ಆರ್. ಕಾವ್ಯ 607 ಮತ್ತು ಆರ್ ಕೀರ್ತಿ 603 ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ.
ಕನ್ನಡ ಭಾಷಾ ವಿಷಯದಲ್ಲಿ 6 ವಿದ್ಯಾರ್ಥಿಗಳು 125ಕ್ಕೆ 125, ಆಂಗ್ಲ ಭಾಷಾ ವಿಷಯದಲ್ಲಿ ಓರ್ವ ವಿದ್ಯಾರ್ಥಿ 100ಕ್ಕೆ 100, ಗಣಿತ ವಿಷಯದಲ್ಲಿ ಇಬ್ಬರು ವಿದ್ಯಾರ್ಥಿಗಳು 100ಕ್ಕೆ 100, ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕಗಳನ್ನು ಓರ್ವ ವಿದ್ಯಾರ್ಥಿ ಪಡೆದುಕೊಂಡಿದ್ದಾರೆ.

















