ಭದ್ರಾವತಿ: ಸಂಸ್ಕøತಿ ಸೌರಭ ಸಂಸ್ಥೆಯು 2018-19 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆದ ನಗರದ ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಜೂ: 2 ರಂದು ಭಾನುವಾರ ಸಂಜೆ 5.30 ಗಂಟೆಗೆ ತರೀಕೆರೆ ರಸ್ತೆಯ ನಯನ ಆಸ್ಪತ್ರೆ ಸಭಾಂಗಣದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಶಿವಮೊಗ್ಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಸಿ. ಗೌರಿಶಂಕರ್ ಭಾಗವಹಿಸಲಿರುವರು. ಸಂಸ್ಥೆಯ ಅಧ್ಯಕ್ಷ ಬಿ.ಎಲ್. ಸೀತಾರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ.
ಅರ್ಜಿದಾರರು ತ್ರಿಮತಸ್ಥ ಬ್ರಾಹ್ಮಣರಲ್ಲಿ ಯಾವುದಾದರು ಪಂಗಡಕ್ಕೆ ಸೇರಿದವರಾಗಿರಬೇಕು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 563 ಅಂಕ ಹಾಗು ಪಿಯುಸಿ ವಿಜ್ಞಾನ ವಿಭಾಗದಲ್ಲಿ 540 ಅಂಕ/ ಕಲಾ ವಿಭಾಗದಲ್ಲಿ 480 ಅಂಕ ಹಾಗು ವಾಣಿಜ್ಯ ವಿಭಾಗದಲ್ಲಿ 510 ಅಂಕಗಳಿಗಿಂತ ಹೆಚ್ಚು ಅಂಕಗಳನ್ನು ಪಡೆದವರು ಮೇ: 25 ರೊಳಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ 9341145201, 8123300881 ಅಥವಾ 9110225450 ಸಂಪರ್ಕಿಸಿ ಮಾಹಿತಿ ಪಡೆಯಬಹುದು.
Discussion about this post