ಭದ್ರಾವತಿ: ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಗುರುವಾರ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು.
ಶಿವಮೊಗ್ಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಟಿ.ಎಂ. ಸೋಮಶೇಖರ್, ನೋಟ್ ಬುಕ್ ವಿತರಿಸಿ ಮಾತನಾಡಿ ಮಕ್ಕಳ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಬಹುಮುಖ್ಯ. ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಹಾಗೂ ಸೌಲಭ್ಯಗಳನ್ನು ಒದಗಿಸುವಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.
ವಿದ್ಯಾರ್ಥಿಗಳು ತಮ್ಮ ಬಾಲ್ಯದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದರೆ, ಮುಂದಿನ ಜೀವನ ಸುಖಮಯವಾಗಿರುತ್ತದೆ. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗಳ ಕಡೆಗೂ ಆಸಕ್ತಿ ರೂಢಿಸಿಕೊಳ್ಳಬೇಕು. ಎಲ್ಲ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೂ ಸಮತೋಲನವನ್ನು ಕಾಯ್ದುಕೊಂಡು ಭವಿಷ್ಯವನ್ನು ಸುಂದರವಾಗಿ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮದ ಎಲ್‍ಕೆಜಿಯಿಂದ ಎಸ್‍ಎಸ್‍ಎಲ್‍ಸಿ ವರೆಗಿನ 550 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್ ಬುಕ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಪ್ರಭಾಕರ್ ಬೀರಯ್ಯ, ಸೌಮ್ಯ ಪ್ರಭಾಕರ್ ಬೀರಯ್ಯ, ಪ್ರಾಂಶುಪಾಲ ಶ್ಯಾಮರಾಯ ಆಚಾರ್, ಮುಖ್ಯ ಶಿಕ್ಷಕ ಪರಮೇಶ್ವರಪ್ಪ, ಶಿಕ್ಷಕ ಮೃತುಂಜಯ ಕಾನಿಟ್ಕರ್ ಮತ್ತಿತರರಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)














