ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಜನರು ಮೆಚ್ಚುವಂತಹ ಕಾರ್ಯಗಳನ್ನು ಮಾಡಿ. ಇದರಿಂದ ಸಮಾಜ ನಮ್ಮನ್ನು ಗುರುತಿಸಿ ಗೌರವಿಸುತ್ತದೆ ಎಂದು ನಗರಸಭೆ ಪೌರಾಯುಕ್ತ ಮನೋಹರ್ ತಿಳಿಸಿದರು.
ಸಿದ್ದಾರೂಢ ನಗರದ ಶಾಶ್ವತಿ ಮಹಿಳಾ ಸಮಾಜದ ವತಿಯಿಂದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾಜದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಾಶ್ವತಿ ಮಹಿಳಾ ಸಮಾಜ ಇತರ ಸಂಘಟನೆಗಳಿಗೆ ಮಾದರಿಯಾಗಿದೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಮಹಿಳಾ ಸಂಘ, ಸಂಘಟನೆಗಳು ಸಹ ಪ್ರಮುಖ ಪಾತ್ರ ವಹಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಶ್ಲಾಘಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನ್ಯಾಯವಾದಿ ರೂಪಾರಾವ್ ಮಾತನಾಡಿ, ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಕಾನೂನಿನ ಅರಿವು ಮತ್ತು ಸಮಾಜಘಾತುಕ ಚಟುವಟಿಕೆಗಳ ವಿರುದ್ಧ ಹೋರಾಟ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಸಹ ವಿತರಿಸಲಾಯಿತು. ರೂಪಾರಾವ್ ಅವರನ್ನು ವರ್ಷದ ಅದೃಷ್ಟದ ಮಹಿಳೆಯಾಗಿ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.
ಸುನಂದ ತಂಡದವರು ಪ್ರಾರ್ಥಿಸಿ, ಮಮತ ಸ್ವಾಗತಿಸಿ, ಯಶೋಧ ವೀರಭದ್ರಪ್ಪ ನಿರೂಪಿಸಿ, ರಶ್ಮಿ ಆರಾಧ್ಯ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post