ಭದ್ರಾವತಿ: ನಗರದ ಹೊಸಮನೆ ಸೆಂಟ್ ಮೇರಿಸ್ ಆಂಗ್ಲ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮೂಲಕ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕ ಶಿವಲಿಂಗೇಗೌಡ, ಶಾಲೆಯ ವ್ಯವಸ್ಥಾಪಕರಾದ ಫಾದರ್ ಥಾಮಸ್ ನಿರಾನಾ ಕುನ್ನೇಲ್ ಹಾಗೂ ಮುಖ್ಯ ಶಿಕ್ಷಕಿ ರಶ್ಮಿರವರು ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ದೈಹಿಕ ಶಿಕ್ಷಕ ಕರಣ್‍ಸಿಂಗ್, ಮೇರಿ ಪ್ರಸನ್ನ, ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಸೇರಿದಂತೆ ಮತ್ತಿತರರಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Discussion about this post