ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಭೂತನಗುಡಿಯ ಸ್ವಂತ ಮನೆಯಲ್ಲಿ ವಾಸಿಸುತ್ತಿದ್ದ ವೃದ್ದ ದಂಪತಿ ನಿಗೂಢವಾಗಿ ಸಾವುಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರ ಚಂದ್ರಪ್ಪ ಹಾಗು ಇವರ ಪತ್ನಿ ಜಯಮ್ಮ ಸಾವುಗೊಂಡಿದ್ದು, ಮನೆಯಲ್ಲಿ ಇವರಿಬ್ಬರು ಮಾತ್ರ ವಾಸವಿದ್ದರು. ಇವರಿಗೆ ಮೂವರು ಗಂಡು ಮಕ್ಕಳಿದ್ದು, ಬೇರೆ ಊರುಗಳಲ್ಲಿ ವಾಸವಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ವಾರ್ಡಿನ ನಗರಸಭೆ ಸದಸ್ಯೆ ಅನುಸುಧಾ ಮೋಹನ್ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತನಿಖೆ ಕೈಗೊಂಡಿರುವ ಪೊಲೀಸರು ಸ್ಥಳಕ್ಕೆ ಪುತ್ರರನ್ನು ಕರೆಸಿದ್ದು, ಶಿವಮೊಗ್ಗ ವಿಶೇಷ ತನಿಖಾ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















