ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರಸಭೆ ನೂತನ ಪೌರಾಯುಕ್ತರಾಗಿ ಕೆಎಂಎಸ್ ಗ್ರೇಡ್-2 ಅಧಿಕಾರಿ, ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎನ್ ಹೇಮಂತ್ ಶನಿವಾರ ಅಧಿಕಾರ ಸ್ವೀಕರಿಸಿದರು.
ಹೇಮಂತ್‌ರವರನ್ನು ಸರ್ಕಾರ ಪೌರಾಯುಕ್ತರ ಹುದ್ದೆಗೆ ಮುಂಬಡ್ತಿ ನೀಡಿ ವರ್ಗಾವಣೆಗೊಳಿಸಿದೆ. ಈ ಮೊದಲು ಇವರನ್ನು ಬಳ್ಳಾರಿ ಮಹಾನಗರಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಹುದ್ದೆಗೆ ನಿಯೋಜನೆಗೊಳಿಸುವ ಉದ್ದೇಶ ಸರ್ಕಾರ ಕೈಗೊಂಡಿತ್ತು. ಪುನಃ ಅದನ್ನು ಮಾರ್ಪಡಿಸಿ ಇಲ್ಲಿನ ನಗರಸಭೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.
ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ನೂತನ ಪೌರಾಯುಕ್ತ ಹೇಮಂತ್‌ರವರಿಗೆ ಅಧಿಕಾರ ಹಸ್ತಾಂತರಿಸಿದರು. ನಗರಸಭೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post