ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕಳೆದ 3-4 ದಿನಗಳ ಹಿಂದೆ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ #Blast ತೀವ್ರವಾಗಿ ಗಾಯಗೊಂಡಿದ್ದ ಹಳೇನಗರ ನಿವಾಸಿ ಕೇಶವಮೂರ್ತಿ(ಗೋಬಿ ಮಂಚೂರಿ ಕೇಶವ) ಇಂದು ಕೊನೆಯುಸಿರೆಳೆದಿದ್ದಾರೆ.
ಕಳೆದ 3-4 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಸಿಲಿಂಡರ್ ಸ್ಪೋಟಗೊಂಡು ಅವರು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ಅವರು ಇಂದು ಏಕಾಏಕಿ ಕೊನೆಯಿಸಿರೆಳೆದಿದ್ದಾರೆ.
Also read: ಶೀಘ್ರದಲ್ಲೇ ಆಶ್ರಯ ಮನೆ ಹಸ್ತಾಂತರಿಸಿ | ವಸತಿ ಸಚಿವರಿಗೆ ತಂಗರಾಜ್ ಮನವಿ
ಸಿಲಿಂಡರ್ ಸ್ಪೋಟದಿಂದ ಕೇಶವಮೂರ್ತಿ ಅವರ ಪತ್ನಿಗೂ ಸಹ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಚೇತರಿಸಿಕೊಂಡಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪತ್ರನನ್ನು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕೇಶವಮೂರ್ತಿ ನಿಧನಕ್ಕೆ ಶಾಸಕ ಬಿ.ಕೆ. ಸಂಗಮೇಶ್, ಬ್ರಾಹ್ಮಣ ಮಹಾಸಭಾದ ಪ್ರಮುಖರು ಸಂತಾಪ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post