ಭದ್ರಾವತಿ: ಕುವೆಂಪು ವಿಶ್ವ ವಿದ್ಯಾಲಯ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಪರೀಕ್ಷಾ ಶುಲ್ಕ, ಅಂಕಪಟ್ಟಿ ಮತ್ತಿತರೇ ಶುಲ್ಕಗಳನ್ನು ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿತು.
ಉನ್ನತ ಶಿಕ್ಷಣ ಇಂದು ಶ್ರೀಮಂತರ ಸ್ವತ್ತಾಗಿದ್ದು ಬಡ ಹಾಗೂ ಮಧ್ಯಮ ವರ್ಗದವರಿಗೆ ಕೈಗೆಟುಕದಂತಾಗಿದೆ. ಇಂತಹ ಸ್ಥಿತಿಗೆ ರಾಜ್ಯಸರಕಾರ ಹಾಗೂ ಅಧೀನ ಸಂಸ್ಥೆಗಳೆ ಕಾರಣವಾಗಿವೆ. ಮಾರ್ಚ್ 5 ರಂದು ಕುವೆಂಪು ವಿವಿ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಸೇರಿದಂತೆ ಹಲವು ಶುಲ್ಕಗಳನ್ನು ಏಕಪಕ್ಷೀಯವಾಗಿ ಹೆಚ್ಚಿಸಿ ಸುತ್ತೋಲೆ ಹೊರಡಿಸಿರುವುದು ಸರಿಯಲ್ಲ. ಇದು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಆರ್ಥಿಕ ಹೊರೆಯಾಗಿದ್ದು ಈ ನಿರ್ಧಾರವನ್ನು ಹಿಂತೆಗೆದುಕೊಳ್ಳದಿದ್ದರೆ ಎಬಿವಿಪಿ ಘಟಕ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂಧರ್ಭದಲ್ಲಿ ಧನುಷ್, ವಿಜಯ್, ರಮೇಶ್, ಯಶವಂತ್, ಗಣೇಶ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Discussion about this post