ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಜಮೀನಿನಲ್ಲಿ ಟ್ರಾನ್ಸ್ ಫಾರ್ಮರ್ ಅಳವಡಿಸುವ ವೇಳೆ ಕಿರಿಕ್ ನಡೆದು ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಕೊಲೆಯಾಗಿರುವ ಘಟನೆ ಶಿವಮೊಗ್ಗ #Shivamogga ಜಿಲ್ಲೆ ಭದ್ರಾವತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.
Also Read>> ವಿಶ್ವವಿದ್ಯಾಲಯಗಳು ಕಲಿತ ವಿಚಾರಗಳ ವೇಗವರ್ಧಿಸುವ ಕೇಂದ್ರಗಳಾಗಬೇಕು | ಪ್ರೊ. ರಾಮ್‌ರಾಮಸ್ವಾಮಿ
ಭದ್ರಾವತಿ #Bhadravathi ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರನ್ನ ದೊಡ್ಡೇರಿ ಗ್ರಾಮದ 35 ವರ್ಷದ ಶಾಂತಕುಮಾರ್ ಎಂದು ಗುರುತಿಸಲಾಗಿದೆ.
ವಿದ್ಯುತ್ ಟ್ರಾನ್ಸ್ ಫಾರ್ಮರ್‌ನ್ನು ತಮ್ಮ ಜಮೀನಿನಲ್ಲಿ ಅಳವಡಿಸುವ ವಿಚಾರವಾಗಿ ಲೇಪಾಕ್ಷಿ ಎಂಬುವರ ಜೊತೆಗೆ ಜಗಳವಾಗಿ, ಜಗಳ ಕೊಲೆಯಲ್ಲಿ #Murder ಅಂತ್ಯವಾಗಿದೆ.
ಜಗಳದಲ್ಲಿ ಶಾಂತಕುಮಾರ್ ಮೇಲೆ ಲೇಪಾಕ್ಷಿ ಎಂಬುವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪರಿಣಾಮ ಶಾಂತಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಭದ್ರಾವತಿ ಗ್ರಾಮಾಂತರ ಪೊಲೀಸರು ಲೇಪಾಕ್ಷಿ ಹಾಗೂ ಇನ್ನೊಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆ ರಾತ್ರಿಯೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post