ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಾನು ಹಳೆಯ ಘಟನೆಗಳನ್ನು ಹೇಳುವುದಿಲ್ಲ. ನನ್ನ ಮೇಲೆ ಪ್ರಕರಣ ದಾಖಲಿಸಿದ್ದಾರೆ. ವಿಧಾನಸಭೆಯಲ್ಲಿ ಅಮಾನತು ಮಾಡಿದ್ದಾರೆ. ಭದ್ರಾವತಿಯಲ್ಲಿ ಚುನಾವಣೆ ಗೆದ್ದ ಇತಿಹಾಸ ಬಿಜೆಪಿ ಪಕ್ಷಕ್ಕಿಲ್ಲ. ಇಂತ ಷಡ್ಯಂತ್ರ ಮಾಡಿ ಬಿಜೆಪಿ ಬೀಜ ಬಿತ್ತೋಕೆ ಹೊರಟಿದ್ದಾರೆ ಎಂದು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಕಿಡಿಕಾರಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ನಮ್ಮ ಕ್ಷೇತ್ರದಲ್ಲಿ ಎಲ್ಲಾ ಸಮುದಾಯದವರಿದ್ದಾರೆ. ಎಲ್ಲರಲ್ಲೂ ಸೌಹಾರ್ಧತೆ ಇದೆ. ಅಧಿಕಾರ ಮುಖ್ಯವಲ್ಲ. ಬಿಜೆಪಿ ಮುಖಂಡರು ಸಣ್ಣ ತನ ತೋರಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಜನ ಇವರ ವರ್ತನೆಯನ್ನು ನೋಡಿ ಅಸಹ್ಯಪಡುತ್ತಿದ್ದಾರೆ. ತಮ್ಮ ಹಾಗೂ ಕುಟುಂಬದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಿದ್ದಾರೆ. ಸ್ಪೀಕರ್ ನಮಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಅವರ ಆದೇಶದ ಮೇರೆಗೆ ತಮ್ಮನ್ನು ಸದನದಿಂದ ಹೊರಹಾಕಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಇವರ ಹಗರಣಗಳು ಹೊರಬರುತ್ತವೆ. ಇವರ ಸರ್ಕಾರ ಬಿದ್ದು ಹೋಗುತ್ತದೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.
ಮಂಗಳವಾರ ನಾವು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಯೋಜನೆ ರೂಪಿಸಿದ್ದೇವೆ. ಕಾಂಗ್ರೆಸ್ ನಾಯಕರು ಧರಣಿ ನಡೆಸಲಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಈ ಸಂದರ್ಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.ಶಾಸಕ ಸಂಗಮೇಶ್ ಪರ ನಿಂತ ಗಾಣಿಗ ಸಮುದಾಯ
ಶಾಸಕ ಬಿ.ಕೆ.ಸಂಗಮೇಶ್ ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿದ ಹಿನ್ನೆಲೆ ಗಾಣಿಗ ಸಮುದಾಯದ ಪೀಠಾಧಿಪತಿ ಮಲ್ಲಿನಾಥ ಶ್ರೀ ಮಾತನಾಡಿ, ನಮ್ಮ ಸಮುದಾಯದವರಾದ ಸಂಗಮೇಶ್ ಮೂರು ಭಾರಿ ಶಾಸಕರಾಗಿದ್ದಾರೆ. ಅವರಿಗೆ ನಮ್ಮ ಸಮುದಾಯದ ವತಿಯಿಂದ ಬೆಂಬಲವನ್ನು ಸೂಚಿಸುತ್ತಿದ್ದೇವೆ. ಭದ್ರಾವತಿಯಲ್ಲಿ ಬಿಜೆಪಿ ಪಕ್ಷದ ಬಲಿಷ್ಟ ಅಭ್ಯರ್ಥಿ ಇಲ್ಲದ ಕಾರಣ ಕಬ್ಬಡಿ ಪಂದ್ಯದ ವೇಳೆ ಘರ್ಷಣೆಯ ಷಡ್ಯಂತ್ರ ರೂಪಿಸಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ನಮ್ಮ ಸಮುದಾಯದಲ್ಲಿ 85 ಲಕ್ಷ ಜನಸಂಖ್ಯೆಯಿದೆ. ಶಾಸಕರ ಪುತ್ರನನ್ನ ಬಂಧಿಸಲಾಗಿದೆ. ಕೂಡಲೇ ಅವರ ಪುತ್ರನನ್ನ ಬಿಡುಗಡೆ ಮಾಡಬೇಕು ಮತ್ತು ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಪ್ರಕರಣವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ನಾವು ಮುಖ್ಯಮಂತ್ರಿ ಅವರಿಗೆ ಮನವಿ ಕೊಡಲು ಮುಂದಾಗಿದ್ದೆವು. ಆದರೆ ನಮಗೆ ಅವರ ಭೇಟಿಗೆ ಅವಕಾಶ ಕೊಡಲಿಲ್ಲ. ಕೂಡಲೇ ಅವರ ಮೇಲಿನ ಪ್ರಕರಣವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post