ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ KSRTC ಬಸ್ ನಿಲ್ದಾಣದ ಪಕ್ಕದಲ್ಲಿ ಭದ್ರಾನದಿಗೆ ಶೀಘ್ರ ನೂತನ ಸೇತುವೆ ನಿರ್ಮಾಣವಾಗುವುದು ಖಚಿತಗೊಂಡಿದ್ದು, ಶಾಸಕ ಬಿ.ಕೆ. ಸಂಗಮೇಶ್ವರ್ #BKSangameshwar ಅವರ ಪ್ರಯತ್ನದ ಫಲವಾಗಿದೆ.
ಬಸ್ ನಿಲ್ದಾಣದ ಪಕ್ಕದಲ್ಲಿರುವ ಕಿರು ಸೇತುವೆಯೇ ಈ ಭಾಗದಲ್ಲಿ ಎರಡೂ ಕಡೆಯ ಸಂಪರ್ಕಕ್ಕೆ ಆಧಾರವಾಗಿದೆ. ಆದರೆ, ಮಳೆಗಾಲದಲ್ಲಿ ಅದರಲ್ಲೂ ಭದ್ರಾ ಅಣೆಕಟ್ಟೆಯಿಂದ ಅಪಾರ ಪ್ರಮಾಣದ ನೀರು ಹರಿಸಿದರೆ, ಸೇತುವೆ #Bridge ಮುಳುಗಿ ಹೋಗುತ್ತದೆ. ಪರಿಣಾಮವಾಗಿ ಕೆಲವೊಮ್ಮೆ ವಾರಗಟ್ಟಲೆ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳ್ಳುತ್ತದೆ. ಇದು ನಗರದ ನಾಗರಿಕರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು.
ದಶಕಗಳಿಂದ ಕಾಡುತ್ತಿರುವ ಈ ಸಮಸ್ಯೆಗೆ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಇದೇ ಸ್ಥಳದಲ್ಲಿ ನೂತನ ಸೇತುವೆ ನಿರ್ಮಾಣ ಮಾಡಬೇಕು ಎಂಬ ಆಗ್ರಹ ದಶಕಗಳಿಂದಲೂ ಇತ್ತು. ಇದಕ್ಕೆ ಪೂರಕವಾಗಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಪ್ರಯತ್ನ ಫಲಿಸುವ ಕಾಲ ಈಗ ಬಂದಿದೆ.
ನೂತನ ಸೇತುವೆ ನಿರ್ಮಾಣಕ್ಕಾಗಿ ಸರ್ಕಾರದಿಂದ 42 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿಯೂ ಸಹ ಆರಂಭವಾಗಲಿದೆ.
ಈ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ವರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸ್ಥಳದಲ್ಲಿ ನೂತನ ಸೇತುವೆ ನಿರ್ಮಾಣದ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಶಾಸಕರು, ಸೇತುವೆಯ ರೂಪುರೇಷೆ ಕುರಿತಾಗಿ ಚರ್ಚಿಸಿದರು.
ಲೋಕೋಪಯೋಗಿ ಇಲಾಖೆಯಿಂದ ಸೇತುವೆ ನಿರ್ಮಾಣ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ, ನಗರಸಭೆ ಅಧ್ಯಕ್ಷೆ ಜೆ.ಸಿ. ಗೀತಾ ರಾಜಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಚನ್ನಪ್ಪ, ಎಂ.ಮಣಿ, ಆರ್. ಶ್ರೇಯಸ್, ಎನ್. ಮಂಜುನಾಥ್, ರಾಜಕುಮಾರ್ ಪೌರಾಯುಕ್ತ ಕೆ.ಎನ್. ಹೇಮಂತ್, ಎಇಇ ಶ್ರೀನಿವಾಸ್, ಗಿರಿಯಪ್ಪ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















