ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಚನ್ನಗಿರಿ #Channagiri ರಸ್ತೆಯಲ್ಲಿನ ಗಣೇಶ ರೈಸ್ ಮಿಲ್’ನಲ್ಲಿ #RiceMill ಬಾಯ್ಲರ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ರಘು ಎಂಬಾತನ ಶವ ಪತ್ತೆಯಾಗಿದ್ದು, ಘಟನೆಯಲ್ಲಿ ಓರ್ವ ಬಲಿಯಾಗಿರುವ ಘಟನೆ ನಡೆದಿದೆ.
ಈ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ವಾಟ್ಸಪ್ ಸಂದೇಶದ ಮೂಲಕ ಮಾಹಿತಿ ನೀಡಿದ್ದು, ಘಟನೆಯಲ್ಲಿ ನಾಪತ್ತೆಯಾಗಿದ್ದ ರಘು ಎಂಬಾತ ಶವವಾಗಿ ಪತ್ತೆಯಾಗಿದ್ದಾನೆ ಎಂದು ತಿಳಿಸಿದ್ದಾರೆ.

Also read: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ
ಬಾಯ್ಲರ್ ಸ್ಫೋಟದಿಂದ #BoilerBlast ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಶಬ್ಧ ಕೇಳಿಸಿದೆ. ಮನೆಯ ಕಿಟಕಿ – ಬಾಗಿಲುಗಳು ಅಲುಗಾಡಿವೆ. ಇದು ನಾಗರೀಕರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಮತ್ತೊಂದೆಡೆ, ಘಟನಾ ಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.
ರೈಸ್ ಮಿಲ್ #RiceMill ಸ್ಫೋಟಗೊಂಡ ಪರಿಣಾಮದಿಂದ ಚನ್ನಗಿರಿ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಜೊತೆಗೆ ಘಟನಾ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post