ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಚನ್ನಗಿರಿ ರಸ್ತೆಯಲ್ಲಿನ ಗಣೇಶ ರೈಸ್ ಮಿಲ್’ನಲ್ಲಿ #RiceMill ಬಾಯ್ಲರ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತಂತೆ ವಾಟ್ಸಪ್ ಮೂಲಕ ಮಾಹಿತಿ ನೀಡಿರುವ ಅವರು, ರೈಸ್ ಮಿಲ್ ಬಾಯ್ಲರ್ ಸ್ಫೋಟದಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ರಘು ಎಂಬ ಕಾರ್ಮಿಕ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಸ್ಫೋಟದ ರಭಸಕ್ಕೆ ರೈಸ್ ಮಿಲ್ ಕಟ್ಟಡವು ಭಾಗಶಃ ಕುಸಿದು ಬಿದ್ದಿದೆ.
ಬಾಯ್ಲರ್ ಸ್ಫೋಟದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಶಬ್ಧ ಕೇಳಿಸಿದೆ. ಮನೆಯ ಕಿಟಕಿ ಬಾಗಿಲುಗಳು ಅಲುಗಾಡಿವೆ. ಇದು ನಾಗರೀಕರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಮತ್ತೊಂದೆಡೆ, ಘಟನಾ ಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.
Also read: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ
ರೈಸ್ ಮಿಲ್ ಸ್ಫೋಟಗೊಂಡ ಪರಿಣಾಮದಿಂದ ಚನ್ನಗಿರಿ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಜೊತೆಗೆ ಘಟನಾ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಸ್ಥಳದಲ್ಲಿ ಅಗ್ನಿಶಾಮಕದಳ, ಅಂಬ್ಯುಲೆನ್ಸ್, ಮೆಸ್ಕಾಂ, ನಗರಸಭೆ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post