ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಸುಣ್ಣದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಇಂದು ಬೆಳಗ್ಗೆ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಸುಬೇದಾರ್ ಗುಲಗುಲೆ, ಉಪಾಧ್ಯಕ್ಷರಾದ ಮಹೇಶ್ ಕುಮಾರ್, ಕಾರ್ಯದರ್ಶಿಗಳಾದ ವೆಂಕಟಗಿರಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಸೌಭಾಗ್ಯ ಭಾಗವಹಿಸಿ ಪರಿಸರ ಸಂರಕ್ಷಣೆ ಕುರಿತು ಹಿತನುಡಿಗಳನ್ನು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಹಣ್ಣುಗಳ ಸಸಿಗಳನ್ನು ನೆಡಲಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಫಲಗಳನ್ನು ನೀಡುವ ಮೂಲಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಸಹಾಯವಾಗಲಿದೆ ಎಂದು ತಿಳಿಸಿದರು.
Also read: ಬೆಂಗಳೂರು: ವೃದ್ಧಾಶ್ರಮಕ್ಕೆ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯಿಂದ ನೆರವು
ಕಾರ್ಯಕ್ರಮಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಮಾಜಿ ಸೈನಿಕರು ಸಕ್ರಿಯವಾಗಿ ಭಾಗವಹಿಸಿದ್ದು, ಅವರಿಗೆ ಆಯೋಜಕರು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















