ಕಲ್ಪ ಮೀಡಿಯಾ ಹೌಸ್ | ಹೊಳೆಹೊನ್ನೂರು |
ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆಯಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಭದ್ರಾವತಿ #Bhadravathi ತಾಲೂಕಿನ ಅರಹತೊಳಲು ಗ್ರಾಮದಲ್ಲಿ ಈ ಭೀಕರ ಅಪಘಾತ #Accident ಸಂಭವಿಸಿದ್ದು, 2 ಬೈಕ್ ಡಿಕ್ಕಿ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಹಾಗೂ ಲಾರಿ #Lorry ಇವರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲಿ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಒಬ್ಬನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂಬುದು ತಿಳಿದುಬಂದಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post