ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ(ಒಬಿಸಿ) ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಶನಿವಾರ ನಗರದ ಬೈಪಾಸ್ ರಸ್ತೆ ಬಿಳಿಕಿ ವೃತ್ತದಲ್ಲಿ ಹಿಂದುಳಿದ ನಗರ ಘಟಕದ ಪ್ರಮುಖರು ಸ್ವಾಗತಿಸುವ ಮೂಲಕ ಅಭಿನಂದಿಸಿದರು.
ಹಿಂದುಳಿದ ನಗರ ಘಟಕದ ಅಧ್ಯಕ್ಷ ಬಿ. ಗಂಗಾಧರ್ ನೇತೃತ್ವದಲ್ಲಿ ಮಧು ಬಂಗಾರಪ್ಪ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಜಗದೀಶ್, ಕಾರ್ಯದರ್ಶಿ ಸತೀಶ್, ಜಿಲ್ಲಾ ಕಾರ್ಯದರ್ಶಿ ಕೃಷ್ಣರಾಜ್, ಯುವ ಕಾಂಗ್ರೆಸ್ ವಕ್ತಾರ ಅಮೋಸ್, ನ್ಯಾಯವಾದಿ ಬಸವರಾಜ್, ತಾಲೂಕು ಮಡಿವಾಳ ಸಮಾಜದ ಉಪಾಧ್ಯಕ್ಷ ಮಂಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.










Discussion about this post