ಭದ್ರಾವತಿ: ಹಳೇನಗರದ ಸಂಚಿಯ ಹೊನ್ನಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಯೋಗಾಭ್ಯಾಸ ಮಾಡಿಸಲಾಯಿತು.
ಖ್ಯಾತ ಸ್ತ್ರೀರೋಗ ತಜ್ಞೆ ಡಾ. ವೀಣಾಭಟ್ ಅವರು ವಿದ್ಯಾರ್ಥಿನಿಯರಿಗೆ ಯೋಗಾಭ್ಯಾಸ ಮಾಡಿಸಿದರು. ಈ ವೇಳೆ ಮಾತನಾಡಿದ ಅವರು, ಸೂರ್ಯ ನಮಸ್ಕಾರ ಹಾಗೂ ಯೋಗಾಭ್ಯಾಸದಿಂದಾಗುವ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಕಾರ್ಯಕ್ರಮವನ್ನು ರಾಷ್ಟಿಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಘಟಕದ ಮುಖ್ಯಸ್ಥರಾದ ಶಶಿಕಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಥಸಪ್ತಮಿ ಅಂಗವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
Discussion about this post