ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೇರಿದಂತೆ ಮೂವರು ಸಾಧಕರಿಗೆ ದೇಶದ ಅತ್ಯುನ್ನತ ಗೌರವ ಪ್ರಶಸ್ತಿಯಾದ ಭಾರತರತ್ನವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಘೋಷಣೆ ಮಾಡಿದೆ.
ಮರಣೋತ್ತರವಾಗಿ ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶ್‌ಮುಖ್ ಮತ್ತು ಸಂಗೀತ ಮಾಂತ್ರಿಕ ಭೂಪೇನ್ ಹಝಾರಿಕಾ ಅವರಿಗೆ ನೀಡಿ ಪುರಸ್ಕರಿಸಲಾಗುತ್ತಿದೆ.
It is with a deep sense of humility and gratitude to the people of India that I accept this great honour #BharatRatna bestowed upon me. I have always said and I repeat, that I have got more from the people of our great country than I have given to them.#CitizenMukherjee
— Pranab Mukherjee (@CitiznMukherjee) January 25, 2019
ಭೂಪೇನ್ ಹಝಾರಿಕಾ ಅವರು ಗಾಯಕ, ಸಾಹಿತಿ, ಸಂಗೀತ ನಿರ್ದೇಶಕ ಮತ್ತು ಸಿನಿ ಸಾಹಿತ್ಯವನ್ನು ಬರೆದು ಪ್ರಖ್ಯಾತಿಯ ಉತ್ತುಂಗಕ್ಕೇರಿದವರು. 1926 ರಲ್ಲಿ ಜನಿಸಿದ್ದ ಅವರು ತನ್ನ 85 ನೇ ವಯಸ್ಸಿನಲ್ಲಿ 2011 ರಲ್ಲಿ ಇಹಲೋಕ ತ್ಯಜಿಸಿದ್ದರು. ಪದ್ಮ ವಿಭೂಷಣ, ಪದ್ಮಶ್ರೀ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೂ ಭಾಜನರಾಗಿದ್ದರು.
ಚಂದಿಕಾದಾಸ್ ಅಮೃತರಾವ್ ದೇಶ್‌ಮುಖ್ (ನಾನಾಜಿ ದೇಶ್‌ಮುಖ್) ಅವರು ಸಾಮಾಜಿಕ ಕಾರ್ಯಕರ್ತರಾಗಿ ಅಪಾರ ಸೇವೆ ಸಲ್ಲಿಸಿದವರು. ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಕೇತ್ರದಲ್ಲಿ ಸೇವೆ ಸಲ್ಲಿಸಿದವರು. ರಾಜ್ಯಸಭಾ ಸದಸ್ಯರಾಗಿಯೂ ಕೆಲಸ ನಿರ್ವಹಿಸಿದ್ದರು. 1916ರಲ್ಲಿ ಜನಿಸಿದ್ದ ಅವರು 2010 ಫೆಬ್ರವರಿ 27 ರಂದು 93 ನೇ ವಯಸ್ಸಿನಲ್ಲಿ ನಿಧನಹೊಂದಿದ್ದರು.
ನಾಳೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ರಾಷ್ಟ್ರಪತಿ ಭವನ ಮೂವರ ಹೆಸರನ್ನು ಪ್ರಕಟಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಪ್ರಣಬ್ ಮುಖರ್ಜಿ ಅವರನ್ನು ಅಭಿನಂದಿಸಿದ್ದಾರೆ.
Pranab Da is an outstanding statesman of our times.
He has served the nation selflessly and tirelessly for decades, leaving a strong imprint on the nation's growth trajectory.
His wisdom and intellect have few parallels. Delighted that he has been conferred the Bharat Ratna.
— Narendra Modi (@narendramodi) January 25, 2019
Discussion about this post