ಕಲ್ಪ ಮೀಡಿಯಾ ಹೌಸ್ | ಭೋಪಾಲ್ |
ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಖಾಸಗಿ ಬಸ್, 50 ಅಡಿ ಎತ್ತರದ ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 15 ಮಂದಿ ದುರ್ಮರಣಕ್ಕೀಡಾಗಿಗಿರುವ ಘಟನೆ ನಡೆದಿದೆ.
ಕನಿಷ್ಠ 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅಪಘಾತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದೋರ್‌ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡ ವ್ಯಕ್ತಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣದ ಕುರಿತಾಗಿ ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿದೆ.












Discussion about this post