ಕಲ್ಪ ಮೀಡಿಯಾ ಹೌಸ್ | ಭುವನೇಶ್ವರ |
ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ 238 ಮಂದಿ ಸಾವಿಗೀಡಾಗಿದ್ದು, ಸುಮಾರು 650 ಮಂದಿ ಗಾಯಗೊಂಡಿದ್ದಾರೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ.
#WATCH | Aerial visuals from ANI’s drone camera show the extent of damage at the spot of the #BalasoreTrainAccident in Odisha. pic.twitter.com/8rf5E6qbQV
— ANI (@ANI) June 3, 2023
ಗಾಯಗೊಂಡ ಪ್ರಯಾಣಿಕರನ್ನು ಗೋಪಾಲ್‌ಪುರ, ಖಾಂತಪಾರಾ, ಬಾಲಸೋರ್, ಭದ್ರಕ್ ಮತ್ತು ಸೊರೊ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು, 12864 ಸರ್ ಎಂ ವಿಶ್ವೇಶ್ವರಯ್ಯ (ಬೆಂಗಳೂರು)-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ 1000 ಪ್ರಯಾಣಿಕರೊಂದಿಗೆ ಹೌರಾ ಕಡೆಗೆ ಪ್ರಯಾಣಿಸುತ್ತಿತ್ತು. ಅಪಘಾತದಿಂದಾಗಿ ಸ್ಥಳದಲ್ಲಿದ್ದ 200 ಮಂದಿ ಪ್ರಯಾಣಿಕರನ್ನು ಹೊತ್ತ ವಿಶೇಷ ರೈಲು ಈಗ ಬಾಲಸೋರ್‌ನಿಂದ ಹೌರಾಕ್ಕೆ ಹೊರಟಿದೆ ಎಂದು ಆಗ್ನೇಯ ರೈಲ್ವೆ ತಿಳಿಸಿದೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿ, ವಿವರವಾದ ಉನ್ನತ ಮಟ್ಟದ ತನಿಖೆಯನ್ನು ನಡೆಸಲಾಗುವುದು ಮತ್ತು ರೈಲು ಸುರಕ್ಷತಾ ಆಯುಕ್ತರು ಸ್ವತಂತ್ರ ತನಿಖೆಯನ್ನು ಮಾಡುತ್ತಾರೆ ಎಂದು ತಿಳಿಸಿದ್ದಾರೆ.











Discussion about this post