ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭುವನೇಶ್ವರಿ ಬಡಾವಣೆಯ ಪಾರ್ಕ್‌ನಲ್ಲಿ ಮೂಲಸೌಕರ್ಯ ಕೊರತೆ ಹಾಗೂ ಭದ್ರತಾ ಸಮಸ್ಯೆಗಳ ಬಗ್ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ವಾರ್ಡ್ ಸಂಖ್ಯೆ 05ರ ಪಾರ್ಕ್‌ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು, ಸ್ಥಳೀಯರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಪಾರ್ಕ್‌ನಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದಿರುವುದು ಹಾಗೂ ರಾತ್ರಿ ವೇಳೆ ಅಸಭ್ಯರ ಹಾವಳಿ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು, ಭಯದಿಂದ ಓಡಾಡಲಾಗದ ಸ್ಥಿತಿ ಉಂಟಾಗಿದೆ ಎಂದು ನಿವಾಸಿಗಳು ತಿಳಿಸಿದರು.
ಈ ಹಿನ್ನೆಲೆಯಲ್ಲಿ, ಬಾಕಿ ಇರುವ ವಿದ್ಯುತ್ ದೀಪಗಳನ್ನು ತಕ್ಷಣ ದುರಸ್ತಿ ಮಾಡಿ ಬೆಳಕಿನ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಜೊತೆಗೆ, ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ರಾತ್ರಿ ಗಸ್ತು ಹೆಚ್ಚಿಸುವ ಮೂಲಕ ಅಸಭ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸೂಚಿಸಿದರು.
ಪರಿಶೀಲನೆ ವೇಳೆ ಬಿಜೆಪಿ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Comments 1