No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಂಡ್ಯ ಜಿಲ್ಲೆಯಲ್ಲಿರುವ ಭೂವರಾಹನಾಥ ಸ್ವಾಮಿಗೆ ಹರಕೆ ಹೊತ್ತರೆ ಫಲ ನಿಶ್ಚಿತ! ಹೇಗಿದೆ ಗೊತ್ತಾ ದೇವಾಲಯ?

kalpa News by kalpa News
May 8, 2021
in Special Articles
0
ಮಂಡ್ಯ ಜಿಲ್ಲೆಯಲ್ಲಿರುವ ಭೂವರಾಹನಾಥ ಸ್ವಾಮಿಗೆ ಹರಕೆ ಹೊತ್ತರೆ ಫಲ ನಿಶ್ಚಿತ! ಹೇಗಿದೆ ಗೊತ್ತಾ ದೇವಾಲಯ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಮೇ 9 ರಂದು ವರಾಹ ಜಯಂತಿ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿರುವ ಕಲ್ಲಹಳ್ಳಿಯ ಅಪರೂಪದ ಭೂವರಾಹನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯುತ್ತದೆ.

ದಶಾವತಾರ ಸ್ವರೂಪದಲ್ಲಿ ಒಂದಾದ ವರಾಹಸ್ವಾಮಿಗೆ ದೇವಾಲಯಗಳು ಅಪರೂಪ. ಬಹುತೇಕ ದೇವಾಲಯಗಳ ಹೊರಭಿತ್ತಿಯಲ್ಲಿ ಕಾಣಿಸುವ ಈ ಅವತಾರದ ಶಿಲ್ಪ ಗರ್ಭಗುಡಿಯಲ್ಲಿ ಪೂಜಿಸುವುದನ್ನು ನೋಡಿದರೆ ಭೂದೇವಿ ಸಮೇತನಾಗಿ ಕಾಣಿಸುವ ಅಪರೂಪದ ಶಿಲ್ಪವೊಂದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನಲ್ಲಿರುವ ಕಲ್ಲಹಳ್ಳಿಯಲ್ಲಿದೆ.

ದೇವಾಲಯದ ಬಗ್ಗೆ
ಸುತ್ತ ಕಣ್ಣಾಯಿಸಿದಷ್ಟು ಹಸಿರು ತುಂಬಿದ ಬಯಲು, ಪಕ್ಕದಲ್ಲೇ ಹರಿಯುವ ಹೇಮಾವತಿ ನದಿಯ ಸೊಬಗು.ಈ ನದಿಯ ದಂಡೆಯ ಮೇಲಿರುವುದೇ ಸಾಲಿಗ್ರಾಮಶಿಲೆಯ ಲಕ್ಷ್ಮೀ ಭೂ ವರಾಹಸ್ವಾಮಿ ದೇಗುಲ.ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆಯ ಕಲ್ಲಹಳ್ಳಿ ಊರಿನ ದೇವಾಲಾಪುರದಲ್ಲಿದೆ ಈ ದೇಗುಲ. ಶಾಸನವೊಂದರ ಪ್ರಕಾರ ಹೊಯ್ಸಳರ ಮುಮ್ಮುಡಿ ಬಲ್ಲಾಳನ ಕಾಲದಲ್ಲಿ ಹೇಮಾವತಿಯ ನದಿಯ ದಂಡೆಯ ಮೇಲೆ ಪುಟ್ಟದಾಗಿ ನಿರ್ಮಾಣವಾದ ದೇವಾಲಯವಿದು. ಸುಮಾರು ಕ್ರಿಶ 1334ರಲ್ಲಿ ಈ ದೇವಾಲಯ ನಿರ್ಮಾಣವಾಗಿರಬಹುದು ಎಂದು ಹೇಳುತ್ತಾರೆ. ಇಲ್ಲಿರುವ ಮೂರ್ತಿ ಅತ್ಯಂತ ಮನಮೋಹಕವಾಗಿದ್ದರೂ ಇತರ ಹೊಯ್ಸಳರ ಕಾಲದ ದೇವಾಲಯಗಳಂತೆ ಶಿಲ್ಪಕಲಾ ಶ್ರೀಮಂತಿಕೆಯಿಂದ ಕೂಡಿಲ್ಲ. ಈಗ ಹಳೆಯ ಗುಡಿಯನ್ನು ಕೆಡವಿ ಹೊಸ ದೇಗುಲವನ್ನು ನಿರ್ಮಿಸಲಾಗಿದೆ. ಹೊಯ್ಸಳ ರಾಜ ಸ್ಥಾಪಿಸಿದ ದೇಗಲವನ್ನು ಮುಂದೆ ಚೋಳರು, ವಿಜಯನಗರದ ಅರಸು ಪೋಷಿಸುತ್ತಾರೆ. ಬಳಿಕ ಮೈಸೂರು ಅರಸರ ಆಳ್ವಿಕೆಗೆ ಒಳಪಡುತ್ತದೆ. ಈಗ ಶ್ರೀಬ್ರಹ್ಮತಂತ್ರ ಸ್ವತಂತ್ರ ಪರಕಾಲ ಮಠದಿಂದ ದೇವಾಲಯವನ್ನು ಜೀಣೋದ್ಧಾರ ಮಾಡಲಾಗುತ್ತಿದೆ.

15 ಅಡಿಯ ವಿಗ್ರಹ
ಇಲ್ಲಿನ ದೇವರ ವಿಗ್ರಹವೇ ವಿಶಿಷ್ಟ. ಇದು 15 ಅಡಿ ಎತ್ತರದ ಸಾಲಿಗ್ರಾಮದ ಏಕಶಿಲೆಯಿಂದ ಕೆತ್ತಲಾಗಿದೆ. ದೇವಾಲಯ ಪ್ರವೇಶಿಸುತ್ತಲೇ ಸಭಾ ಮಂಟಪದ ಎದುರು ಗರ್ಭಗುಡಿ ಇದೆ. ಒಳಗಡೆ ಪೀಠದ ಮೇಲೆ ವರಾಹಸ್ವಾಮಿ ವಿಗ್ರಹವಿದೆ. ವರಾಹಾವತಾರದ ವಿಷ್ಣುವಿನ ಆಜಾನುಬಾಹು ದೇಹ, ಬಲಿಷ್ಠ ತೋಳುಗಳು, ಎತ್ತರವಾದ ನಿಲುವಿನ ಭಂಗಿಯಲ್ಲಿರುವ ಮೂರ್ತಿ, ಎಡತೊಡೆಯ ಮೇಲೆ ಪತ್ನಿ ಲಕ್ಷ್ಮೀ ಭೂದೇವಿಯನ್ನು ಕೂರಿಸಿಕೊಂಡಿರುವ ಭಂಗಿಯಲ್ಲಿದೆ. ಕೈಯಲ್ಲಿ ಕಮಲದ ಹೂವು. ವರಾಹಸ್ವಾಮಿಯ ಒಂದು ಕೈಯಲ್ಲಿ ಚಕ್ರ, ಮತ್ತೊಂದು ಕೈಯಲ್ಲಿ ಶಂಖ, ಎಡತೊಡೆಯ ಮೇಲೆ ಕುಳಿತಿರುವ ಪತ್ನಿ ಲಕ್ಷ್ಮಿಯನ್ನು (ಭೂದೇವಿ) ಎಡಗೈನಿಂದ ತಬ್ಬಿಕೊಂಡಿರುವಂತೆ ಕೆತ್ತಿರುವ ವಿಗ್ರಹವಿದು.

ಭಕ್ತರ ನಂಬಿಕೆ
ಈ ಭೂವರಾಹಸ್ವಾಮಿಗೆ ಹರಕೆ ಹೊತ್ತರೆ, ಭೂವಿವಾದಗಳು ಇತ್ಯರ್ಥವಾಗುತ್ತವೆ ಎಂಬ ನಂಬಿದೆ ಇಲ್ಲಿದೆ. ಮರಳು, ಮಣ್ಣು ಅಥವಾ ಇಟ್ಟಿಗೆಯನ್ನು ದೇವರ ಮುಂದಿಟ್ಟು ಪೂಜೆ ಸಲ್ಲಿಸಿ, ದೇವಾಲಯದ ಪಕ್ಕದಲ್ಲಿ ಅದೇ ಸಾಮಗ್ರಿಗಳಿಂದ ಗೂಡು ಕಟ್ಟಿ ಹರಿಕೆ ಸಲ್ಲಿಸಿದರೆ, ಗೃಹ ನಿರ್ಮಾಣದ ಬಯಕೆ ಸಿದ್ಧಿಸುತ್ತದೆ ಎಂಬುದು ಭಕ್ತರ ನಂಬಿಕೆ.

ಪುರಾಣ, ಪೂಜೆ ವಿಶೇಷ
ಹಿರಣ್ಯಕಶಿಪುವಿನ ಸಹೋದರ ಹಿರಣ್ಯಾಕ್ಷನು ಭೂದೇವಿಯನ್ನು ಹೊತ್ತೊಯ್ದು ಸಮುದ್ರದಲ್ಲಿ ಬಂಧಿಸಿಡುತ್ತಾನೆ. ಮಹಾವಿಷ್ಣುವು ವರಾಹಾವತಾರವನ್ನು ತಾಳಿ ಹಿರಾಣ್ಯಾಕ್ಷನನ್ನು ಕೊಂದು ಭೂದೇವಿಯನ್ನು ರಕ್ಷಿಸಿದ ಎಂಬುದು ಪುರಾಣದ ಕಥೆ. ಈ ವರಾಹಾವತಾರದ ಮಹಿಮೆಯನ್ನು ಈ ಸುಂದರ ದೇವಾಲಯ ಹೇಳುತ್ತಿರುವಂತಿದೆ. ಆಲಯದ ಬಯಲಿನಲ್ಲಿ ಶಾಸನವೂ ದೊರೆತಿದೆ.ಇನ್ನು, ನರಸಿಂಹ ಜಯಂತಿ, ವೈಕುಂಠ ಏಕಾದಶಿಯಲ್ಲಿ ಮಾತ್ರವಲ್ಲದೆ, ಪ್ರತಿ ಶನಿವಾರ ಈ ದೇವಾಲಯದಲ್ಲಿ ವಿಶೇಷ ಪೂಜೆ ನನಿಯೋಗದ ವ್ಯವಸ್ಥೆಯೂ ಇದೆ.(ಕೊರೋನಾ ಕಾರಣದಿಂದ ತಾತ್ಕಾಲಿಕ ಸ್ಥಗಿತಗೊಂಡಿದೆ) ಪ್ರತಿ ನಿತ್ಯ ಬೆಳಗ್ಗೆ 8ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 4ರಿಂದ 7 ಗಂಟೆಯವರೆಗೆ ಪೂಜೆ ನಡೆಯುತ್ತದೆ.

ತಲುಪುವುದು ಹೇಗೆ?
ಬೆಂಗಳೂರಿನಿಂದ 180 ಕಿಮೀ, ಮೈಸೂರಿನಿಂದ 53 ಕಿಮೀ. ಕೆ.ಆರ್. ಪೇಟೆ ಮಾರ್ಗವಾಗಿ 18 ಕಿಮೀ ದೂರದಲ್ಲಿ ಈ ದೇವಾಲಯವಿದೆ. ಕೆಆರ್ ಪೇಟೆ-ಮೇಲುಕೋಟೆ-ಕಲ್ಲಹಳ್ಳಿಗೆ ಬಸ್ ಸೌಲಭ್ಯವಿದೆ. ಸ್ವಂತ ವಾಹನದಲ್ಲಿ ಬರುವವರು ಈ ದೇವಾಲಯ ಭೇಟಿಯೊಂದಿಗೆ ಸುತ್ತಲಿನ ಪ್ರವಾಸಿ ತಾಣಗಳಿಗೂ ಭೇಟಿ ನೀಡಬಹುದು.

ಸದ್ಯ ಭಕ್ತಾದಿಗಳಿಗೆ ದೇವರ ದರ್ಶನ ಇಲ್ಲ
ಕೊರೋನಾ ಹಿನ್ನೆಲೆಯಲ್ಲಿ ಸದ್ಯ ತಾತ್ಕಾಲಿಕವಾಗಿ ದೇವಾಲಯಕ್ಕೆ ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ದೇಶ ವ್ಯಾಪಿ ಹರಡಿರುವ ಕರೊನಾ ನಿರ್ಮೂಲನೆ ಆಗುವಂತೆ ದೇವಾಲಯದ ಪ್ರಧಾನ ಅರ್ಚಕರು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯಲ್ಲಿ ಬೇಡಿಕೊಳ್ಳುತ್ತಾರೆ ಎಂದು ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಶ್ರೀನಿವಾಸ ರಾಘವನ್ ತಿಳಿಸಿದ್ದಾರೆ.

ಕೋವಿಡ್ ನಿಯಮಗಳನ್ನು ಅನುಸರಿಸಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: bhuvaraha swamy templeKannada News WebsiteLatest News KannadaMandyamysoreಕೊರೋನಾ 2ನೆಯ ಅಲೆಕೊರೋನಾ ಸೋಂಕುಭೂವರಾಹಸ್ವಾಮಿಮಂಡ್ಯವರಾಹ ಜಯಂತಿ
Share224Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಅಗತ್ಯ ವಸ್ತು ಖರೀದಿಗೆ ಜನಸಂದಣಿ: ಫೀಲ್ಡಿಗಿಳಿದ ಆಯುಕ್ತ ಮನೋಹರ್’ರಿಂದ ತೆರವು ಕಾರ್ಯ

Next Post

ಜಿಲ್ಲೆಯಲ್ಲಿ ವಾರ್ಡ್‌ವಾರು ನಾಕಾಬಂಧಿ: ರೋಡಿಗಿಳಿದರೆ ವಾಹನ ಸೀಜ್, ಮೆಡಿಕಲ್ ಶಾಪ್’ಗೂ ನಡೆದುಕೊಂಡೇ ಹೋಗಿ

kalpa News

kalpa News

Next Post
ಜಿಲ್ಲೆಯಲ್ಲಿ ವಾರ್ಡ್‌ವಾರು ನಾಕಾಬಂಧಿ: ರೋಡಿಗಿಳಿದರೆ ವಾಹನ ಸೀಜ್, ಮೆಡಿಕಲ್ ಶಾಪ್’ಗೂ ನಡೆದುಕೊಂಡೇ ಹೋಗಿ

ಜಿಲ್ಲೆಯಲ್ಲಿ ವಾರ್ಡ್‌ವಾರು ನಾಕಾಬಂಧಿ: ರೋಡಿಗಿಳಿದರೆ ವಾಹನ ಸೀಜ್, ಮೆಡಿಕಲ್ ಶಾಪ್’ಗೂ ನಡೆದುಕೊಂಡೇ ಹೋಗಿ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL