ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಘಟಕ ಖಾಸಗೀಕರಣ ಬಿಡ್ ಪ್ರಸ್ತಾಪವನ್ನು ಎಸ್’ಎಐಎಲ್ ರದ್ದುಗೊಳಿಸಿದೆ.
ಭಾರತೀಯ ಉಕ್ಕು ಪ್ರಾಧಿಕಾರ ನಗರದಲ್ಲಿ ಹೊಂದಿರುವ ಉಕ್ಕು ಘಟಕ(ವಿಐಎಸ್’ಪಿ) ಘಟಕವನ್ನು ಖಾಸಗಿಯವರಿಗೆ ವಹಿಸಲು ಬಿಡ್ ಕರೆಯಲಾಗಿತ್ತು.
ಆದರೆ, ಕೇಂದ್ರ ಸರ್ಕಾರದ ಬಂಡವಾಳ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ವಿಭಾಗ ಈ ಘಟಕವನ್ನು ಖಾಸಗಿಯವರಿಗೆ ವಹಿಸುವ ಈ ಪ್ರಸ್ತಾಪಕ್ಕೆ ನಿರೀಕ್ಷಿತ ಸಂಖ್ಯೆಯಲ್ಲಿ ಬಿಡ್’ದಾರರು ಆಸಕ್ತಿ ತೋರದ ಹಿನ್ನೆಲೆಯಲ್ಲಿ ಪ್ರಸ್ತಾಪವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















