ಕಲ್ಪ ಮೀಡಿಯಾ ಹೌಸ್ | ರಾಮನಗರ |
ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಸ್ಥಳೀಯ ರೈತರ ಆಕ್ರೋಶ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.
ಜಮೀನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದರ ನಡುವೆಯೂ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೇಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.
ಜೆಎಂಸಿ ಸರ್ವೇ ನಡೆಸಬಾರದೆಂದು ಮಂಡಲಹಳ್ಳಿ ಗ್ರಾಮದ ರೈತರು ಮುಂಚಿತವಾಗಿ ಎಚ್ಚರಿಕೆ ನೀಡಿದ್ದರೂ, ಅದನ್ನು ಲೆಕ್ಕಿಸದೆ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ರೈತ ಮಹಿಳೆಯರು ಪೊರಕೆ ಏಟು ನೀಡಿದ ಘಟನೆ ನಡೆದಿದೆ.
Also read: ದೇಶದಲ್ಲಿ ಶೋಕಾಚರಣೆ | ಅರ್ಧ ಮಟ್ಟಕ್ಕೆ ರಾಷ್ಟ್ರಧ್ವಜ ಹಾರಾಟ | ಕಾರಣವೇನು?
ಸರ್ವೇಗೆ ಬಂದ ಅಧಿಕಾರಿಗಳ ಕಾರನ್ನು ಸುತ್ತುವರಿದ ರೈತರು ಪೊರಕೆ ಹಾಗೂ ಕಲ್ಲುಗಳಿಂದ ದಾಳಿ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಘಟನೆ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರೂ, ರೈತರ ಕೋಪ ತಣ್ಣಗಾಗಲಿಲ್ಲ.
ಘಟನೆ ಹಿನ್ನೆಲೆ ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್ಪಿ) ಶ್ರೀನಿವಾಸ ಗೌಡ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿದರು. ಎಎಸ್ಪಿ ರಾಮಚಂದ್ರಯ್ಯ ಹಾಗೂ ಡಿವೈಎಸ್ಪಿ ಗಿರೀಶ್ ಸ್ಥಳದಲ್ಲೇ ತಂಗಿದ್ದು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಕ್ರಮ ಕೈಗೊಂಡಿದ್ದಾರೆ.
ಈ ವೇಳೆ ಪೊಲೀಸ್ ಅಧಿಕಾರಿಗಳು ರೈತರಿಗೆ ಮನವಿ ಮಾಡುತ್ತಾ, “ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಮಾಡಬೇಡಿ. ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬೇಡಿ” ಎಂದು ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








