ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ಕನ್ನಡ ಶ್ರೇಷ್ಟವಾದ ಕನ್ನಡವಾಗಿದೆ. ಪಕ್ಕದಲ್ಲೇ ತೆಲಂಗಾಣ, ಮಹಾರಾಷ್ಟ್ರ್ರ ರಾಜ್ಯವಿದ್ದು, ತೆಲಗು, ಮರಾಠಿಗಳ ನಡುವೆ ಕೂಡ ಬೀದರ್ ನಲ್ಲಿರುವ ನಾವು ನಮ್ಮ ತನವನ್ನು ಬಿಟ್ಟುಕೊಡದೆ ನಮ್ಮ ಭಾಷೆಯನ್ನು ಉಳಿಸಿ, ಬೆಳಸಿಕೊಂಡು ಸಾಗುತ್ತಿದ್ದೇವೆಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹೇಳಿದರು.
ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನ, ಗಂಗನಪಳ್ಳಿ ಪರಿವಾರ, ಸಿಕಿಂದ್ರಾಪೂರ ಪರಿವಾರ ಬೀದರ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೆವರು ರಂಗಮಂದಿರದಲ್ಲಿ ಭಾನುವಾರ ನಡೆದ ಶಿಕ್ಷಕ – ಸಾಹಿತಿ ಡಾ. ಸಂಜುಕುಮಾರ ಅತಿವಾಳೆ ಸಂಪಾದಿಸಿರುವ ಭಾವಗಂಗೆ ಕೃತಿ ಲೋಕಾರ್ಪಣೆ ಹಾಗೂ ಸಾಹಿತಿ – ಕಲಾವಿದರ ಸಂಗಮ ಸಾಂಸ್ಕೃತಿಕ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೀದರ್ ಭಾಷೆಯೇ ದೊಡ್ಡ ಸಾಹಿತ್ಯವಾಗಿದೆ. ಇಲ್ಲಿನ ಕನ್ನಡ ವಿಶೇಷ ಕನ್ನಡವಾಗಿದೆ ಎಂದರು.

ವಿಧಾನ ಪರಿಷತ್ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆರವರು ಮಾತನಾಡಿ, ಸಾಹಿತಿ ಗಂಗನಪಳ್ಳಿರವರು ಸಾಹಿತ್ಯಕ್ಕಾಗಿ ಬಹಳಷ್ಟು ಶ್ರಮಿಸಿದ್ದಾರೆ. ಅವರು ಕನ್ನಡ ಸಾಹಿತ್ಯಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಿದ್ದಾರೆ. ಅವರು ಐವತ್ತು ವರ್ಷಗಳಿಂದ ಸಾಹಿತ್ಯ ಸೇವೆಯಲ್ಲಿ ತೊಡಗಿದ್ದಾರೆ. ಅವರ ಸಾಹಿತ್ಯದ ಸೇವೆ ಇವತ್ತು ಪುಸ್ತಕ ರೂಪದಲ್ಲಿ ಹೊರಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ, ಹಿರಿಯ ಸಾಹಿತಿ ಎಂ.ಜಿ ಗಂಗನಪಳ್ಳಿ, ಡಾ. ರಾಜಶೇಖರ ಜಮದಂಡಿ, ಪ್ರೊ. ಸಿದ್ರಾಮಪ್ಪ ಮಾಸಿಮಾಡೆ, ಗುರಮ್ಮ ಸಿದ್ದಾರೆಡ್ಡಿ, ಪುಣ್ಯವತಿ ವಿಸಾಜಿ, ಅಮೃತರಾವ್ ಚಿಮಕೋಡೆ, ಸುರೇಶ ಚನ್ನಶೆಟ್ಟಿ, ಕವಿತಾ ಸ್ವಾಮಿ, ಡಾ. ಶಾಮರಾವ್ ನೆಲವಾಡೆ, ರೇಣುಕಾ ಮಳ್ಳಿ, ಲಕ್ಷ್ಮಣ ಮೇತ್ರೆ ಸೇರಿದಂತೆ ಅನೇಕರಿದ್ದರು.












Discussion about this post