ಕಲ್ಪ ಮೀಡಿಯಾ ಹೌಸ್ | ಬೀದರ್ |
ನಾವೆಲ್ಲರೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾಗಿದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಶಿಕ್ಷಣವಂತರನ್ನಾಗಿ ಮಾಡೋಣವೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ರವರು ಹೇಳಿದರು.
ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೆವರು ರಂಗಮಂದಿರದಲ್ಲಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ವತಿಯಿಂದ ಭಾನುವಾರ ನಡೆದ ಗೊಂಡ (ಕುರುಬ) ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರಿಂದ ಉತ್ತಮ ಸಮಾಜ ನಿರ್ಮಿಸಬಹುದಾಗಿದೆ ಎಂದರು.

ಇವತ್ತಿನ ದಿನಗಳಲ್ಲಿ ಈ ರೀತಿಯ ಅಭಿನಂದನಾ ಸಮಾರಂಭಗಳು ಅವಶ್ಯಕವಾಗಿವೆ. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಮತ್ತು ಸಮಾಜದ ಸಾಧಕರಿಗೆ ಅಭಿನಂದನೆ ಸಲ್ಲಿಸುತ್ತಿರುವುದು ಅನೇಕರಿಗೆ ಮಾದರಿಯಾಗಲಿದೆ. ಅನೇಕರಿಗೆ ಪ್ರೋತ್ಸಾಹ ಸಿಗುತ್ತದೆ. ಈ ರೀತಿಯ ಕಾರ್ಯಕ್ರಮಗಳು ಇನ್ನೂ ಹೆಚ್ಚಾಗಲಿ. ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿರುವ ಸಂಘಟನೆಯ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
Also read: ಎಲ್ಲಾ ಧರ್ಮಗುರು, ಹಿರಿಯರಿಂದ ಯುವಕರ ನಿಯಂತ್ರಣ ಸಾಧ್ಯ: ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

ಸಿಂಧುತ್ವ ಸಮಸ್ಯೆ ನಿವಾರಣೆಗಾಗಿ ನಿರಂತರ ಹೋರಾಟ:
ಸಿಂಧುತ್ವದ ವಿಷಯದಲ್ಲಿನ ಸಮಸ್ಯೆ ನಿವಾರಣೆಗಾಗಿ ನಾವೆಲ್ಲರೂ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಇತ್ತೀಚೆಗೆ ನೂರಕ್ಕೂ ಹೆಚ್ಚಿನ ಸಿಂಧುತ್ವ ಸಮಸ್ಯೆಯನ್ನು ಪರಿಹರಿಸಲಾಗಿದೆ. ಜಿಲ್ಲಾಧಿಕಾರಿಗಳು ಸಿಂಧುತ್ವ ಸಮಸ್ಯೆ ಪರಿಹಾರದ ವಿಷಯದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಸಮಾಜದ ಒಳಿತಿಗಾಗಿ ಎಲ್ಲರೂ ಒಗ್ಗಟ್ಟಾಗಿ ಸಾಗೋಣ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಕರೆ ನೀಡಿದರು.











Discussion about this post