ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ನಗರದ ಗಣೇಶ ಮೈದಾನದ ಬಳಿ ಇರುವ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ಜಿಲ್ಲಾ ಕಛೇರಿಯಲ್ಲಿ ಶುಕ್ರವಾರ ಬೆಳಗ್ಗೆ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷರು, ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ರಮೇಶ್ ಪಾಟೀಲ್ ಸೋಲಪೂರ್ ರವರು ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾರ ಹಾಕಿ ಪೂಜೆ ಸಲ್ಲಿಸಿದರು.


ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಡ್ಗೆ, ಪಕ್ಷದ ಪ್ರಮುಖರಾದ ದೇವೇಂದ್ರ ಸೋನಿ, ಮಾರುತಿ ಬೌದ್ಧೆ, ಸಜ್ಜದ್ ಸಾಹೇಬ್, ಮಹಮ್ಮದ್ ಅಸದೊದ್ದೀನ್, ಅಭಿ ಕಾಳೆ, ಗಾಂಚನ್ ಕಪಲಾಪೂರ, ಲಲಿತಾ ಕರಂಜಿ, ಶಾಂತಮ್ಮ ಸೇರಿದಂತೆ ಅನೇಕರಿದ್ದರು.









ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp:










