No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಗೊಂಡ, ಟೋಕರಿ ಕೋಳಿ ಜಾತಿಗಳ ಸಿಂಧುತ್ವ ಸಮಸ್ಯೆ ಪರಿಹಾರಕ್ಕಾಗಿ ಸಿಎಂಗೆ ಮನವಿ

kalpa News by kalpa News
December 17, 2021
in ಬೀದರ್
0
ಗೊಂಡ, ಟೋಕರಿ ಕೋಳಿ ಜಾತಿಗಳ ಸಿಂಧುತ್ವ ಸಮಸ್ಯೆ ಪರಿಹಾರಕ್ಕಾಗಿ ಸಿಎಂಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಎಸ್.ಟಿ ಟೋಕರಿ ಕೋಳಿ, ಎಸ್ಟಿ ಗೊಂಡ ಸೇರಿದಂತೆ ವಿವಿಧ ಜಾತಿಗಳ ಸಿಂಧುತ್ವ ಪ್ರಮಾಣವನ್ನು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ (ಜಾಗೃತಿ ಕೋಶ) ವರದಿ ಪಡೆದ ನಂತರವೇ ನೀಡಬೇಕೆಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಜಿಲ್ಲೆಯ ಗಣ್ಯರ ನೇತೃತ್ವದಲ್ಲಿ ಗೊಂಡ ಮತ್ತು ಟೋಕರಿ ಕೋಳಿ ಸಮಾಜದ ಮುಖಂಡರು ಸಿಎಂ ಬಸವರಾಜ ಬೊಮ್ಮಾಯಿರವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳ ಮುಖಂಡತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಗೊಂಡ ಮತ್ತು ಟೋಕರಿ ಕೋಳಿ ಸಮಾಜದ ಮುಖಂಡರು, ರಾಜ್ಯದಲ್ಲಿ 51 ವಿವಿಧ ಬುಡಕಟ್ಟಿನ ಜಾತಿಗಳು ಪರಿಶಿಷ್ಟ ಪಂಗಡದಲ್ಲಿರುತ್ತವೆ.

ಆದರೆ ಕೇವಲ 12 ಜಾತಿಗಳಿಗೆ ಮಾತ್ರ ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ ಕಡ್ಡಾಯಗೊಳಿಸಿರುವುದರಿಂದ ಗೊಂಡ ಮತ್ತು ಟೋಕರಿ ಕೋಳಿ ಜಾತಿ ಜನಾಂಗಕ್ಕೆ ಅನ್ಯಾಯವಾಗುತ್ತಿದೆ. ಭಾರತ ಸಂವಿಧಾನದ ಪರಿಚ್ಛೇದ 15ರಲ್ಲಿ ಜಾತಿ, ಧರ್ಮ, ಹುಟ್ಟಿದ ಸ್ಥಳ ಮತ್ತು ಲಿಂಗ ಇವುಗಳಲ್ಲಿ ಯಾವುದೇ ತಾರತಮ್ಯ ಮಾಡಲು ಅವಕಾಶ ಇರುವುದಿಲ್ಲ. ಆದರೆ ಉಲ್ಲೇಖಿತ ಆದೇಶದಲ್ಲಿ 51 ಜಾತಿಗಳ ಪೈಕಿ ಕೇವಲ 12 ಜಾತಿಗಳಿಗೆ ಮಾತ್ರ ಸೀಮಿತಗೊಳಿಸಿ, ಸಿಂಧುತ್ವ ಪ್ರಮಾಣ ಪತ್ರಕ್ಕೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ ಕಡ್ಡಾಯಗೊಳಿಸಿ, ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟು ಮಾಡಲಾಗಿದೆ.

1993ರಲ್ಲಿಯೇ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಾತಿ ಪರಿಶೀಲನಾ ಸಮಿತಿಯನ್ನು ಸರಕಾರವು ರಚಿಸಿ, ಸಿಂಧುತ್ವ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಿದೆ. ಮುಂದುವರೆದು ಸ್ಟೇಟ್ ಬ್ಯಾಂಕ ಆಫ್ ಹೈದರಬಾದನ, ನೌಕರರ ಪ್ರಕರಣದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯವು ದಿನಾಂಕ: 07-07-1997 ರಂದು ತೀರ್ಪು ನೀಡಿದ್ದು, ಸಿಂಧುತ್ವ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಜಿಲ್ಲೆಯ ಜಾತಿ ಪರಿಶೀಲನಾ ಸಮಿತಿಗಳು ಪರಿಶೀಲಿಸಬೇಕಿದ್ದು, ಇದರಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಯಾವುದೇ ಪಾತ್ರವಿಲ್ಲ ಎಂದು ಆದೇಶಿಸಿದೆ.

ಉಲ್ಲೇಖಿತ ಆದೇಶವು ಸಂವಿಧಾನದ ಆಶಯಗಳಿಗೆ ತದ್ವಿರುದ್ದವಾಗಿದ್ದು, ನ್ಯಾಯಲಯ ನೀಡಿದ ತೀರ್ಪಿಗೂ ಧಕ್ಕೆ ಉಂಟಾಗಿರುತ್ತದೆ. ಆದ್ದರಿಂದ ಉಲ್ಲೇಖಿತ ಆದೇಶವನ್ನು ಹಿಂತೆಗೆದುಕೊಂಡು ಗೊಂಡ ಮತ್ತು ಟೋಕರಿ ಕೋಳಿ ಜನಾಂಗದ ಮೇಲಾಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಬರೆದ ಮನವಿ ಪತ್ರ ಹಾಗೂ ಟೋಕರಿ ಕೋಳಿ ಸಮಾಜದಿಂದ ಬರೆದ ಇನ್ನೊಂದು ಮನವಿ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಸಲ್ಲಿಸಿದರು.

ಇದೇ ವೇಳೆ ಶಾಸಕ ಬಂಡೆಪ್ಪ ಖಾಶೆಂಪುರ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಸಚಿವ ಪ್ರಭು ಚವ್ಹಾಣ್, ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ್, ಶರಣು ಸಲಗಾರ, ರಹಿಂಖಾನ್, ವಿಧಾನ ಪರಿಷತ್ ಸದಸ್ಯರಾದ ಅರವಿಂದ ಕುಮಾರ್ ಅರಳಿ, ಚಂದ್ರಶೇಖರ್ ಪಾಟೀಲ್, ವಿಜಯ ಸಿಂಗ್ ರವರು ಮಾತನಾಡಿ, ಗೊಂಡ ಮತ್ತು ಟೋಕರಿ ಕೋಳಿ ಸಮಾಜದ ಸಿಂಧುತ್ವ ಪ್ರಮಾಣ ಪತ್ರಗಳ ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಮನವಿ ಮಾಡಿದರು. ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿ ಕೊಡುವ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನೀಡಿದರು.

ಈ ಸಂದರ್ಭದಲ್ಲಿ ಟೋಕರಿ ಕೋಳಿ ಸಮಾಜದ ಮುಖಂಡರಾದ ಮಾರುತಿಮಾಸ್ಟರ್, ನಾರಾಯಣರಾವ ಭಂಗಿ, ಜಗನ್ನಾಥ ಜಮಾದಾರ, ಶಿವರಾಜ ಬಂಬೊಳಗಿ, ರಾಜು ಬೋರಾಳ, ಶರಣಪ್ಪ ಖಾಶೆಂಪುರ್, ಸಂಜುಕುಮಾರ ಗುಮಾಸ್ತಿ, ರವೀಂದ್ರ ಗುಮಾಸ್ತಿ, ಸಂತೋಷಿ ಚೌಕಿ, ಗೊಂಡ ಸಮಾಜದ ಮುಖಂಡರಾದ ಅಮೃತರಾವ್ ಚಿಮಕೋಡೆ, ಪಂಡಿತರಾವ್ ಚಿದ್ರಿ, ಬಾಬುರಾವ್ ಮಲ್ಕಾಪುರೇ, ಬಸವರಾಜ ಮಾಳ್ಗೆ, ಮಾಳಪ್ಪ ಅಡಸಾರೆ, ಶಿವರಾಜ ಬಿರಾದಾರ, ವಿಜಯಕುಮಾರ ಖಾಶೆಂಪುರ್, ರವೀಂದ್ರ ಕಣಜೆ, ಮಲ್ಲಿಕಾರ್ಜುನ ಬಿರಾದರ ಸೇರಿದಂತೆ ಅನೇಕರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaMLA Bandeppa KashempurNews in KannadaNews Kannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್ಸಿಎಂ ಬಸವರಾಜ ಬೊಮ್ಮಾಯಿ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಎನ್‌ಎನ್‌ಸಿಇಯಲ್ಲಿ ಎಂಜಿನಿಯರಿಂಗ್ ಸೀಟುಗಳು ಲಭ್ಯ: ಆಸಕ್ತರಿಗಾಗಿ ಇಲ್ಲಿದೆ ಮಾಹಿತಿ…

Next Post

ಕುವೆಂಪು ವಿವಿ ಅಂತರ ಕಾಲೇಜು ಕುಸ್ತಿ ಪಂದ್ಯಾವಳಿ: ಶಿರಾಳಕೊಪ್ಪ ಕಾಲೇಜಿಗೆ ಆರು ಪ್ರಶಸ್ತಿ

kalpa News

kalpa News

Next Post
ಕುವೆಂಪು ವಿವಿ ಅಂತರ ಕಾಲೇಜು ಕುಸ್ತಿ ಪಂದ್ಯಾವಳಿ: ಶಿರಾಳಕೊಪ್ಪ ಕಾಲೇಜಿಗೆ ಆರು ಪ್ರಶಸ್ತಿ

ಕುವೆಂಪು ವಿವಿ ಅಂತರ ಕಾಲೇಜು ಕುಸ್ತಿ ಪಂದ್ಯಾವಳಿ: ಶಿರಾಳಕೊಪ್ಪ ಕಾಲೇಜಿಗೆ ಆರು ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL