ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 28 ಕೊನೆಯ ದಿನವಾಗಿದೆ.

ಬೀದರ ಜಿಲ್ಲಾ ಕಚೇರಿಗೆ 2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ಮಾಹೆಯಾನ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ, ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಟೈಪಿಂಗ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದAದು 40 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಸೇರಿದಂತೆ ಇನ್ನೀತರ ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಸ್ಥಳೀಯ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಬೇರೆ ಜಿಲ್ಲೆಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.


ಆಸಕ್ತರು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರೈಲ್ವೆ ನಿಲ್ದಾಣದ ಆವರಣದ ಹತ್ತಿರ, ಬೀದರ ಜಿಲ್ಲೆ, ಬೀದರ ಇಲ್ಲಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ವಾರ್ತಾ ಇಲಾಖೆಯ ದೂರವಾಣಿ ಸಂಖ್ಯೆ 08482-225370ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















