ಅಷ್ಟೂರು ಗ್ರಾಮಕ್ಕೆ ಭೇಟಿ ನೀಡಿ ನವರಾತ್ರಿ ನಿಮಿತ್ತವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಷ್ಟೂರಿನಲ್ಲಿ ಕೊರೋನಾ ಎರಡನೆಯ ಅಲೆಯ ವೇಳೆಯಲ್ಲಿ ನಮಗೆ ಆತ್ಮೀಯರಾದ ಶಂಕರರಾವ್ ಪಾಟೀಲ್, ಮಹದೇವ್ ಪಾಟೀಲ್ ರನ್ನು ನಾವು ಕಳೆದುಕೊಂಡಿದ್ದೇವೆ. ಅವರು ಕುಸ್ತಿ ಸೇರಿದಂತೆ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳಸುವ ಕೆಲಸವನ್ನು ಮಾಡಿದ್ದರು ಎಂದರು.
ಅಷ್ಟೂರ ವಿಶೇಷವಾದ ಗ್ರಾಮವಾಗಿದೆ. ನಾನು ಕೂಡ ಈ ಗ್ರಾಮದ ಅಭಿವೃದ್ಧಿ ಸೇರಿದಂತೆ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಾಧ್ಯವಾದಷ್ಟು ಕೆಲಸಗಳನ್ನು ಮಾಡಿಕೊಂಡು ಸಾಗಿದ್ದೇನೆ. ತ್ಯಾಜ್ಯ ವಿಲೇವಾರಿ ವಿಷಯಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗ ಕ್ರಮ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚಿಸುತ್ತೇನೆ. ಕಮಿಷನರ್ ರವರೊಂದಿಗೆ ಕೂಡ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.
ಇದೇ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಗ್ರಾಮದ ಯಾವ್ಯಾವ ರಸ್ತೆಗಳು ಅಭಿವೃದ್ಧಿ ಆಗಬೇಕಾಗಿದೆ. ಎಷ್ಟು ಅನುದಾನ ಬೇಕಾಗಿದೆ. ಏನೆಲ್ಲಾ ಕೆಲಸಗಳು ಬಾಕಿ ಇವೆ ಎಂಬ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ಗ್ರಾಮದ ಅಭಿವೃದ್ಧಿಗಾಗಿ 50 ಲಕ್ಷ ರೂ.ಗಳನ್ನು ಈಗಲೇ ನೀಡುತ್ತೇನೆ. ಆ 50 ಲಕ್ಷ ರೂ.ಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಸೇರಿದಂತೆ ಅವಶ್ಯಕ ಕೆಲಸಗಳನ್ನು ಮಾಡಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ವೀಕ್ಷಣೆ ನಡೆಸಿ, ಗ್ರಾಮಸ್ಥರ ಸಮಸ್ಯೆ ಆಲಿಸಿದ ಶಾಸಕರು:
ನವರಾತ್ರಿ ಕಾರ್ಯಕ್ರಮದ ಬಳಿಕ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಗ್ರಾಮದ ವಿವಿಧ ಏರಿಯಾಗಳಿಗೆ ಭೇಟಿ ನೀಡಿ, ಅಭಿವೃದ್ಧಿ ಕೆಲಸಗಳ ಪರಿಶೀಲನೆ ನಡೆಸಿ, ಅಂಬೇಡ್ಕರ್ ಭವನ, ಚರ್ಚ್, ವೀರಭದ್ರೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿ ಆಗಬೇಕಾಗಿರುವ ಕೆಲಸಗಳ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು. ಗ್ರಾಮದ ಮಹಿಳೆಯರು, ಯುವಕರು, ವೃದ್ಧರನ್ನು ಮಾತನಾಡಿಸಿದ ಶಾಸಕರು ನಿಮ್ಮ ಸಮಸ್ಯೆಗಳು ಏನಾದರೂ ಇದ್ದರೆ ಹೇಳಿ ಎಂದರು.
ಇದೇ ವೇಳೆ ಅನೇಕರು ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಅವುಗಳನ್ನು ಪರಿಹರಿಸುವ ಕೆಲಸ ಮಾಡುವ ಭರವಸೆಯನ್ನು ಶಾಸಕರು ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post