ಕಲ್ಪ ಮೀಡಿಯಾ ಹೌಸ್
ಬೀದರ್: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ ನೀಡಿದರು.
ಬಗದಲ್ ತಾಂಡಾದಿಂದ ಬುಧೇರ – ಚಟನ್ನಳ್ಳಿ, ಚಟನ್ನಳ್ಳಿ ವಾಡಿ ಹಾಗೂ ಯದಲಾಪೂರುದಿಂದ ನಾಗೋರಾ ಕ್ರಾಸ್ – ಕುತಾಬಾದ, ಮಿರ್ಜಾಪೂರ (ಎ) ಮತ್ತು ಬೇಳೂರಾನಿಂದ ಕಮಠಾಣಾ, ಬಾವಗಿ (ಎಮ್.ಡಿ.ಆರ್) – ಬಕ್ಕೌಡಿ ಹಾಗೂ ಸಿಕೇಂದ್ರಪೂರ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
ನಾನು ಮೊದಲ ಬಾರಿಗೆ ಶಾಸಕನಾಗಿದ್ದಾಗ ಈ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕೆಲಸ ಮಾಡಿದ್ದೆ. ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತಾ ಬಂದಿದ್ದೇನೆ. ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಬೇಕಾಗುವುದರಿಂದ ಅವಕಾಶ ಸಿಕ್ಕಾಗಲೆಲ್ಲಾ ರಸ್ತೆ ನಿರ್ಮಾಣ ಕೆಲಸಗಳನ್ನು ಮಾಡಲಾಗುತ್ತಿದೆ.
ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಕಾಮಗಾರಿಯ ಗುತ್ತಿಗೆದಾರರಿಗೆ ತಿಳಿಸಿದ್ದೇನೆ. ನಿಗದಿತ ಸಮಯದಲ್ಲೇ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.
ಈ ಸಂದರ್ಭದಲ್ಲಿ ಇಇ, ಎಇಇ, ಜೆಇ, ಗುತ್ತೆದಾರರು, ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post