ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಯಶಸ್ವಿಗೊಳಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಕೃತಜ್ಞತೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಆತ್ಮೀಯ ಬಂಧು ಮಿತ್ರರೇ ಮತ್ತು ನನ್ನೆಲ್ಲಾ ಪ್ರೀತಿಯ ಮುಖಂಡರುಗಳೆ, ಕಾರ್ಯಕರ್ತರೆ ನಿಮ್ಮಗಳ ಶ್ರಮದ ಫಲವಾಗಿ ಜನವರಿ 6ರಂದು ಶುಕ್ರವಾರ ನನ್ನ ಮತ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಗಳು, ಪಕ್ಷದ ಹಿರಿಯರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸೇರಿದಂತೆ ಪಕ್ಷದ ಹಿರಿಯರ ಸಮ್ಮುಖದಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ ಪಂಚರತ್ನ ರಥಯಾತ್ರೆಯ ಎರಡನೇ ದಿನದ ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ನಡೆದಿದ್ದು, ತಮ್ಮೆಲ್ಲರ ಪ್ರೀತಿಗೆ ಸಾಷ್ಟಾಂಗ ನಮಸ್ಕಾರಗಳನ್ನು ಸಲ್ಲಿಸುತ್ತೇನೆ.
ಕಾರ್ಯಕ್ರಮದ ಯಶಸ್ವಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಶ್ರಮಿಸಿದ ಸರ್ವರಿಗೂ ಈ ಮೂಲಕ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ. ನಿಮ್ಮ ಪ್ರೀತಿ ಅಭಿಮಾನ ಸದಾಕಾಲವೂ ಹೀಗೆ ಇರಲಿ. ಎಲ್ಲರೂ ಸೇರಿ ಕ್ಷೇತ್ರದ ಒಳಿತಿಗಾಗಿ ದುಡಿಯೋಣ. ಸರ್ವರಿಗೂ ಶುಭವಾಗಲಿ. ಧನ್ಯವಾದಗಳು.” ಎಂದು ಕೃತಜ್ಞತಾ ಸಂದೇಶವನ್ನು ಹಂಚಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post