ಕಲ್ಪ ಮೀಡಿಯಾ ಹೌಸ್ | ಬೀದರ್ ದಕ್ಷಿಣ |
ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಹಾಲಿ ಶಾಸಕ ಬಂಡೆಪ್ಪ ಖಾಶೆಂಪುರ್ Bandeppa Khashempur ಅವರು ಸರ್ವಧರ್ಮಗಳನ್ನು ಸಮನ್ವಯತೆಯಿಂದ ಕಾಣುತ್ತಾ ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಯನ್ನೂ ತಲುಪುವ ಪ್ರಯತ್ನ ಮಾಡುತ್ತಿದ್ದಾರೆ.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ತಮ್ಮ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕೋಳಾರ ಕೆ ಸೇರಿದಂತೆ ವಿವಿಧ ಗ್ರಾಮಗಳ ವಿವಿಧ ಪಕ್ಷಗಳ ಮುಖಂಡರನ್ನು ಸ್ವಾಗತಿಸಿದರು.

Also read: ರಾಜ್ಯ ಚುನಾವಣಾ ಅಖಾಡಕ್ಕೆ ಯೋಗಿ ಆದಿತ್ಯನಾಥ್ ಎಂಟ್ರಿ: ಮಂಡ್ಯದಲ್ಲಿ ಅಬ್ಬರದ ಪ್ರಚಾರ
ಇನ್ನು, ಮಗ್ದಳ್ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬಂಬಳಗಿ ಗ್ರಾಮದ ಹಜರತ್ ಸೈಯದ್ ನೂರ್ ಷಾ ವಲಿ ರಹಮತ್ತು ಅಲೈ ಇ ದರ್ಗಾದಲ್ಲಿ ನಡೆದ ಸಂದಲ್ (ಉರುಸ್ ಕವ್ವಾಲಿ) ಕಾರ್ಯಕ್ರಮದಲ್ಲಿ ಪಾಲ್ಗೊಂಡರು.











Discussion about this post