ಕಲ್ಪ ಮೀಡಿಯಾ ಹೌಸ್ | ಬೀದರ್ |
ವಿಧಾನಸಭಾ ಚುನಾವಣೆಯ ಬೀದರ್ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಹಿರಿಯ ಮುಖಂಡ, ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ಅವರು ಎ.18ರ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಂಚಿಕೊAಡು ಮಾತನಾಡಿರುವ ಅವರು, ಎ.18ರ ಮಂಗಳವಾರ ನಾನು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಮಂಗಳವಾರ ಎ.18ರಂದು ಬೆಳಗ್ಗೆ 11 ಗಂಟೆಗೆ ಬೀದರ್ ನಗರದ ಒಲ್ಡ್ ಸಿಟಿ (ಹಳೆ ಸರ್ಕಾರಿ ಆಸ್ಪತ್ರೆ ಹತ್ತಿರ) ಯಲ್ಲಿರುವ ನಮ್ಮ ನಿವಾಸದಿಂದ ಪಾದಯಾತ್ರೆಯ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತಿದ್ದೇನೆ. ತಾವೆಲ್ಲರೂ ಬಂದು ಆಶೀರ್ವಾದ ಮಾಡಬೇಕೆಂದು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳಲ್ಲಿ ಅವರು ಮನವಿ ಮಾಡಿದ್ದಾರೆ.
Also read: ದೇವೇಗೌಡರಿಗೆ ನಮಸ್ಕರಿಸಿ ಆರ್ಶೀವಾದ ಪಡೆದು ಬಿಫಾರಂ ಪಡೆದ ಬಂಡೆಪ್ಪ ಖಾಶೆಂಪುರ
ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ದರ್ಶನ
ಭವಾನಿ ಮಾತೆಯ ಅಪ್ಪಟ ಭಕ್ತರಾಗಿರುವ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಭವಾನಿ ಮಾತೆಯ ವಾರವಾಗಿರುವ ಮಂಗಳವಾರದಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಕೆ ಮಾಡುತ್ತಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಭವಾನಿ ಮಾತೆ ಮಂದಿರ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post