ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆ ಶುಕ್ರವಾರ ನಡೆಯಲಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ #Bandeppa Khashempur ತಿಳಿಸಿದ್ದಾರೆ.
ಏ.10ರಂದು ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, ಏ.12ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಲೋಕಸಭಾ ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡರ, ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
Also read: ಗೀತಾ ಶಿವರಾಜಕುಮಾರ್ ಗೆ ಬೆಳ್ಳಿ ಕಡ್ಗ ಉಡುಗೊರೆಯಾಗಿ ನೀಡಿದ ಮಹಿಳೆ
ಸಭೆಯಲ್ಲಿ ಕೇಂದ್ರ ಸಚಿವರು ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾಗಿರುವ ಭಗವಂತ ಖೂಬಾರವರು ಪಾಲ್ಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಯ ಸಿದ್ದತೆ, ಚುನಾವಣಾ ಪ್ರಚಾರ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ತಪ್ಪದೇ ಆಗಮಿಸಬೇಕೆಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post