ಕಲ್ಪ ಮೀಡಿಯಾ ಹೌಸ್ | ಬೀದರ್ |
ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಅವರು ಇಂದು ಮಂಡಿಸಿದ 2024-25ನೇ ಸಾಲಿನ ಬಜೆಟ್ ಅಭಿವೃದ್ಧಿ ವಿರೋಧಿ, ಜನ ವಿರೋಧಿ ಹಾಗೂ ರೈತ ವಿರೋಧಿಯಾಗಿದೆ. ಯಾವುದೇ ಗೊತ್ತು ಗುರಿ ಇಲ್ಲದ ಬೋಗಸ್ ಗ್ಯಾರಂಟಿ ಬಜೆಟ್ ಇದಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಬೀದರ್ ದಕ್ಷಿಣ ವಿಧಾನಸಭೆ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ MLA Shailendra Beldale ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೋಢೀಕರಿಸಲು ಪರದಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಕಾರಣಕ್ಕಾಗಿ ಅಭಿವೃದ್ಧಿ ಹಳ್ಳ ಹಿಡಿಸಲಾಗಿದೆ. ಇದೀಗ ಬಜೆಟ್ ನಲ್ಲಿ ಯಾವುದೇ ಮಹತ್ವದ ಯೋಜನೆ ಘೋಷಣೆ ಮಾಡಿಲ್ಲ ಎಂದಿದ್ದಾರೆ.

Also read: ತಲೆ ಬುಡವಿಲ್ಲದ ಬೋಗಸ್ ಬಜೆಟ್: ಸರ್ಕಾರದ ವಿರುದ್ಧ ಎಂಎಲ್’ಸಿ ಡಿ.ಎಸ್. ಅರುಣ್ ಕಿಡಿ
ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದಾರೆ. ಹೀಗಾಗಿ ಈ ಬಾರಿ ಹಿಂದುಳಿದ ಬೀದರ್ ಜಿಲ್ಲೆಗೆ ವಿಶೇಷ ಯೋಜನೆ ಸಿಗಬಹುದೆಂಬ ಜನರ ಭರವಸೆಗಳು ಸಂಪೂರ್ಣ ಹುಸಿಯಾಗಿವೆ. ಬಂಡವಾಳ ಹೂಡಿಕೆದಾರರಿಗೆ ಜಿಲ್ಲೆಗೆ ಆಕರ್ಷಿಸಿ ಜವಳಿ(ಅಪರೇಲ್ ಪಾರ್ಕ್) ಅಥವಾ ದೊಡ್ಡ ಕೈಗಾರಿಕೆ ತಂದು ದುಡಿಯುವ ಕೈಗಳಿಗೆ ಉದ್ಯೋಗ ಕಲ್ಪಿಸಬಹುದು ಎಂಬ ಜನರ ಬೇಡಿಕೆಗೆ ಸ್ಪಂದಿಸಿಲ್ಲ. ಗೋದಾವರಿ ಜಲಾನಯನದ ನೀರಿನ ಸದ್ಬಳಕೆ ಮಾಡಿಕೊಂಡು ರೈತರಿಗೆ ಅನುಕೂಲ ಕಲ್ಪಿಸುವ ರೈತರ ಬೇಡಿಕೆಗೆ ಮನ್ನಣೆ ನೀಡಿಲ್ಲ. ಕಾರಂಜಾ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುವ ಗೋಜಿಗೆ ಹೋಗಿಲ್ಲ. ಜಿಲ್ಲೆಯ ನೀರಾವರಿ, ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಿಲ್ಲ ಎಂದು ದೂರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post