ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗೌಸಪೂರ, ಬರೂರು ತಾಂಡ, ಬರೂರು, ಚಿಂತಲಾಗೇರ, ಧರ್ಮಾಪೂರ, ಹೊಕ್ರಾಣ ಬಿ, ಹೊಕ್ರಾಣ ಕೆ ಸೇರಿದಂತೆ ವಿವಿಧೆಡೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಗುರುವಾರ ಬೆಳಗ್ಗೆ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನಪರ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಈ ಚುನಾವಣೆಯಲ್ಲಿ ನಮ್ಮನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತನ್ನಿ, ನಾವು ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡಲಿದ್ದೇವೆ. ರೈತರ ಬೋರ್ವೆಲ್ ಗಳಿಗೆ ದಿನದ ಇಪ್ಪತ್ನಾಲ್ಕು ತಾಸು ವಿದ್ಯುತ್ ಪೂರೈಕೆ ಮಾಡಲಿದ್ದೇವೆ ಎಂದರು.

ಮಹತ್ವದ ಜನಪರ ಯೋಜನೆಗಳ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದ್ದೇವೆ. ಕ್ಷೇತ್ರದ ಮತ್ತು ರಾಜ್ಯದ ಮತದಾರರು ಜೆಡಿಎಸ್ ಪಕ್ಷಕ್ಕೆ ತಮ್ಮ ಅಮೂಲ್ಯವಾದ ಮತ ನೀಡಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಚುನಾವಣಾ ಪ್ರಚಾರದ ನಡುವೆ ಅವರು ಗ್ರಾಮಗಳ ಮಂದಿರ, ಚರ್ಚ್, ದರ್ಗಾಗಳಿಗೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿ, ಮಹಾತ್ಮರ ಪುತ್ಥಳಿ, ಪ್ರತಿಮೆ, ಪೋಟೋಗಳಿಗೆ ಮಾಲಾರ್ಪಣೆ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post