ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳ ಪ್ರಮುಖ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರಾಗಿದ್ದ ಅಭಿಲಾಷ್ ಸಿಂಧೆ ನಾಗೋರೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು ಆಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರ, ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಕಾರ್ಯಕರ್ತರು, ಶಾಸಕ ಬಂಡೆಪ್ಪ ಖಾಶೆಂಪುರ್ ರವರ MLA Bandeppa Khashempur ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಪಕ್ಷ ಸಂಘಟನೆ, ಬಲವರ್ಧನೆ, ಚುನಾವಣೆ ಸಿದ್ಧತೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ನೂತನ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಶಾಸಕರಾದ ಬಂಡೆಪ್ಪ ಖಾಶೆಂಪುರ್ ರವರ ಮತ್ತು ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಪ್ರಾಮುಖ್ಯತೆ ನೀಡಿ ನಾವು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವೆ. ಜೆಡಿಎಸ್ ಪಕ್ಷದ ಬಲವರ್ಧನೆಗಾಗಿ ದುಡಿಯುತ್ತೇವೆಂದು ಇದೇ ವೇಳೆ ನೂತನ ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದರು.
Also read: ಏ.5, 6ರಂದು ಕುವೆಂಪು ವಿವಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ
ಈ ಸಂದರ್ಭದಲ್ಲಿ ರೇವಣಸಿದ್ದಪ್ಪಾ ಸಿರಕಟನಳ್ಳಿ, ಅಭಿಲಾಷ್ ಸಿಂಧೆ, ತುಕ್ಕರಾಮ, ಪ್ರವೀಣ್ ಹೊನ್ನ, ಅಹಮದ್, ರಮೇಶಕುಮಾರ್, ಉದಯಕುಮಾರ್, ಲಾಲಪ್ಪ, ಕಲಪ್ಪಾ, ರಮೇಶ, ಜಗನ್ನಾಥ, ಬಸಪ್ಪಾ, ಮಾಣಿಕ, ಬಾಬು, ಜೈರಾಜ್, ಧನರಾಜ್, ರಮೇಶ್ ಖಂಡೆಪ್ಪಾ, ರತನ, ಸುನೀಲ್, ಮಯಿಪಾಲರೆಡ್ಡಿ, ರಮೇಶ್ ಭಾವಿದೊಡ್ಡಿ, ಗೌತಮ್, ಅಶೋಕ ಸೇರಿದಂತೆ ಅನೇಕ ಜನ ಮುಖಂಡರು, ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post