ಕಲ್ಪ ಮೀಡಿಯಾ ಹೌಸ್ | ಬೀದರ್ |
ಹನ್ನೊಂದನೇ ಶತಮಾನದಲ್ಲಿ ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡುವ ಮೂಲಕ ಸಮಾಜ ಸುಧಾರಣೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಅದರಂತೆಯೇ ಈಗ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಬೇಕಾಗಿರುವುದು ಅತ್ಯಗತ್ಯವಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹೇಳಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಎಖೇಳ್ಳಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್ ಮತ್ತು ಸೈನ್ಸ್ ಲ್ಯಾಬ್ ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದೆ ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ರವರು ಯಾವುದೇ ಅತ್ಯುತ್ತಮ ಸೌಕರ್ಯಗಳು ಇಲ್ಲದ ಕಾಲದಲ್ಲಿಯೇ ಕಷ್ಟಪಟ್ಟು ಓದಿ ಭಾರತಕ್ಕೆ ಅತ್ಯುತ್ತಮವಾದ ಸಂವಿಧಾನ ರಚಿಸಿಕೊಟ್ಟಿದ್ದಾರೆ. ಈಗ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಸುಧಾರಣೆಗಳಾಗಿವೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ತಮ್ಮ ಮನೆಯ ಮಕ್ಕಳಿಗೆ ಅಕ್ಷರ ಜ್ಞಾನ ಕಲ್ಪಿಸಿಕೊಡುವುದು ಅವಶ್ಯಕವಾಗಿದೆ. ಯಾರಾದರೂ ಏನಾದ್ರು ಸಾಧನೆ ಮಾಡಿದ್ದಾರೆ ಎಂದರೆ ಅದು ಅವರಿಗೆ ಸಿಕ್ಕ ಶಿಕ್ಷಣ, ಅಕ್ಷರ ಜ್ಞಾನದಿಂದ ಸಾಧ್ಯವಾಗಿರುತ್ತದೆ.
Also read: ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆರ್. ಕಿರಣ್ ನೇಮಕ
ನಾನು ಶಾಸಕನಾದಾಗಿನಿಂದಲೂ ಶಿಕ್ಷಣ ಕ್ಷೇತ್ರದಲ್ಲಿನ ಸುಧಾರಣೆಗಾಗಿ ಬಹಳಷ್ಟು ಅನುದಾನವನ್ನು ಒದಗಿಸಿಕೊಡುತ್ತಾ ಬಂದಿದ್ದೇನೆ. ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಕ್ಲಾಸ್ ರೂಮ್, ಅಂತರ್ಜಾಲ ಸೌಕರ್ಯ, ಮಾದರಿ ಶಾಲೆಗಳ ನಿರ್ಮಾಣಕ್ಕಾಗಿ ಅನುದಾನ ಒದಗಿಸಿಕೊಟ್ಟಿದ್ದೇನೆ. ಈಗಾಗಲೇ ಸ್ಮಾರ್ಟ್ ಕ್ಲಾಸ್ ಗಳ ರಚನೆಯಾಗಿವೆ. ಮುಂದಿನ ದಿನಗಳಲ್ಲಿ ಕೂಡ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸಿಕೊಡುವ ಕೆಲಸ ಮಾಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಲೈಬ್ರರಿ ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ, ಮಕ್ಕಳ ಕಲಿಕೆಯ ಅನುಕೂಲಕ್ಕಾಗಿ ನಾವು ಸರ್ಕಾರಿ ಶಾಲೆಗಳಿಗೆ ಹಣ ಒದಗಿಸುತ್ತಿದ್ದೇವೆ. ಮನ್ನಾಎಖೇಳ್ಳಿಯ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಪ್ಲಾಂಟ್ (ಆರ್‌ಒ ಪ್ಲಾಂಟ್) ನಿರ್ಮಿಸಿ ಕೊಡುವ ಕೆಲಸವನ್ನು ನಾವು ಮಾಡುತ್ತೇವೆಂದು ಬೀದರಿನ ಎಸ್‌ಬಿಐ ರಿಜಿನಲ್ ಮ್ಯಾನೇಜರ್ ಹರೀಶ್ ಭರವಸೆ ನೀಡಿದರು.











Discussion about this post