ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಪಲಾಪೂರ ಎ, ಕಮಠಾಣಾ, ಬೈರನಳ್ಳಿ, ಯದಲಾಪೂರ, ನೆಲವಾಳ, ವಕ್ರಾಣ ಬಿ, ಬೆಳ್ಳೂರು, ಅಮಲಾಪೂರ ಸೇರಿದಂತೆ ವಿವಿಧ ಗ್ರಾಮಗಳ ವಿವಿಧ ಪಕ್ಷಗಳ ನೂರಾರು ಜನ ಯುವಕರು, ಮುಖಂಡರು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ವಿವಿಧ ಗ್ರಾಮಗಳ ವಿವಿಧ ಪಕ್ಷಗಳ ನೂರಾರು ಜನ ಯುವಕರು, ಮುಖಂಡರಿಗೆ ಬುಧವಾರ ಜೆಡಿಎಸ್ ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಪ್ರಾದೇಶಿಕ ಪಕ್ಷವಾಗಿದೆ. ನಾಡು, ನುಡಿ, ನೆಲ, ಜಲದ ವಿಷಯದಲ್ಲಿ ನಾವು ನಿರಂತರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇವೆ. ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ನಾಡಿನ ಒಳಿತಿಗಾಗಿ ಅನೇಕ ಅತ್ಯುತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅಧಿಕಾರಕ್ಕೆ ಬಂದ ಕೂಡಲೇ ಇನ್ನೂ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ ಎಂದರು.
ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕಾಗಿದೆ. ಪಕ್ಷದ ಕಾರ್ಯಕರ್ತರು, ಮುಖಂಡರು ಮನೆಮನೆಗೂ ತೆರಳಿ ಜೆಡಿಎಸ್ ಪಕ್ಷ ಮಾಡಿರುವ ಜನಪರ ಕೆಲಸಗಳು, ಅಧಿಕಾರಕ್ಕೆ ಬಂದ ಕೂಡಲೇ ಮಾಡಲಿರುವ ಮಹತ್ವದ ಕಾರ್ಯಗಳ ಬಗ್ಗೆ ತಿಳಿಸಬೇಕು. ಪ್ರತಿಮನೆಮನೆಗೂ ಪಕ್ಷದ ತತ್ವ ಸಿದ್ದಾಂತಗಳ ಬಗ್ಗೆ ಮಾಹಿತಿ ಮುಟ್ಟಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಪಲಾಪೂರ ಎ, ಕಮಠಾಣಾ, ಬೈರನಳ್ಳಿ, ಯದಲಾಪೂರ, ನೆಲವಾಳ, ವಕ್ರಾಣ ಬಿ, ಬೆಳ್ಳೂರು, ಅಮಲಾಪೂರ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post