ಕಲ್ಪ ಮೀಡಿಯಾ ಹೌಸ್ | ಬೀದರ್ |
ನಮಗೆ ದೇವೇಗೌಡರು ಸ್ಪೂರ್ತಿಯಾಗಿದ್ದಾರೆ. ಅವರ 91ನೇ ವಯಸ್ಸಿನಲ್ಲೂ ಕೂಡ ನೀವು ಯಾರು ಹೆದರಬೇಡಿ ಎಂದು ನಮಗೆ ಧೈರ್ಯ ಹೇಳಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಮಂಗಳವಾರ ಜೆಡಿಎಸ್ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ಬಂಡೆಪ್ಪರವರದ್ದು ರಾಜಕೀಯ ಮುಗಿತು ಎಂದುಕೊಳ್ಳಬೇಡಿ. ಈಗ ಹೊಸ ಅಧ್ಯಾಯ ಆರಂಭವಾಗಿದೆ ಎಂದರು.

Also read: ಸಚಿನ್ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ: ಮದ್ಯ ಮಾರಾಟ ಸಂಘ ಆಗ್ರಹ
ಚುನಾವಣೆಗೆ ನಿಲ್ಲಬೇಕು, ಶಾಸಕ ಆಗಬೇಕು ಎಂಬ ಆಸೆಯಂತೂ ಅಂದು ನನಗೆ ಇರಲಿಲ್ಲ. ಜನರ ಪ್ರೀತಿ ವಿಶ್ವಾಸದಿಂದಾಗಿ ರಾಜಕೀಯಕ್ಕೆ ಬಂದಿದ್ದೇನೆ. ಜನರಿಗೆ ಒಳಿತು ಮಾಡುವ ಉದ್ದೇಶದಿಂದ ರಾಜಕೀಯದಲ್ಲಿ ಇದ್ದೇನೆ. ನಾನು ಸೋಲು ಗೆಲುವು ಎರಡನ್ನೂ ಕಂಡಿದ್ದೀನಿ. ರಾಜಕೀಯ ನದಿ ಇದ್ದಂತೆ ಹರಿದುಕೊಂಡು ಸಾಗುತ್ತಿರುತ್ತದೆ. ನನ್ನ ಐದು ಚುನಾವಣೆಗಿಂತ ಹೆಚ್ಚಿನ ಬೆಂಬಲ ಈ ಚುನಾವಣೆಯಲ್ಲಿ ನನಗೆ ಸಿಕ್ಕಿತ್ತು, ಆದ್ರು ಸೋಲಾಗಿದೆ ಎಂದರು.

ಸ್ಥಳೀಯ ಚುನಾವಣೆಗಳಿಗೆ ಸಿದ್ದರಾಗೋಣ:
ಕೆಲವೇ ತಿಂಗಳಲ್ಲಿ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗಳು ನಡೆಯಲಿವೆ. ನಾವೆಲ್ಲರೂ ಸೇರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕಾಗಿದೆ. ತಳಮಟ್ಟದಿಂದ ಪಕ್ಷ ಸಂಘಟಿಸುವ ಕೆಲಸ ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡಬೇಕಾಗಿದೆ. ಎಲ್ಲರೂ ಸೇರಿ ಪಕ್ಷ ಸಂಘಟನೆ, ಬಲವರ್ಧನೆ ಮಾಡೋಣವೆಂದು ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಕರೆ ನೀಡಿದರು.











Discussion about this post