ಕಲ್ಪ ಮೀಡಿಯಾ ಹೌಸ್ | ಬೀದರ್ |
ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರ ಜನ್ಮ ದಿನಕ್ಕೆ ೫೯ ಕೆ.ಜಿ ತೂಕದ ಕೆಕ್ ಕತ್ತರಿಸಿ ಶುಭ ಕೋರಿದ ಅಭಿಮಾನಿಗಳು
ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ 59ನೇ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿಗಳು 59 ಕೆ.ಜಿ ತೂಕದ ಕೇಕ್ ಕತ್ತರಿಸುವ ಮೂಲಕ ಜನ್ಮ ದಿನಕ್ಕೆ ಶುಭ ಕೋರಿದರು.
ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರ ನಿವಾಸಕ್ಕೆ ಗುರುವಾರ ಬೆಳಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮಾಜಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರಿಗೆ ಜನ್ಮ ದಿನದ ಶುಭ ಕೋರಿದರು.
ಕಲಬುರಗಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜೆಡಿಎಸ್ ಪಕ್ಷದ ಪ್ರಮುಖ ನಾಯಕರು, ಮುಖಂಡರು, ಕಾರ್ಯಕರ್ತರು, ಆಪ್ತರು, ವಿವಿಧ ಕ್ಷೇತ್ರದ ಜನಪ್ರತಿನಿಧಿಗಳು ಮಾಜಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಸನ್ಮಾನಿಸಿ ಗೌರವಿಸಿದರು.
ಇದಕ್ಕೂ ಮುಂಚೆ, ಜನ್ಮ ದಿನದ ಅಂಗವಾಗಿ ಗುರುವಾರ ಬೆಳಗ್ಗೆ ಬಂಡೆಪ್ಪ ಖಾಶೆಂಪುರ್ ರವರು, ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಖಾನಾಪೂರದ ಶ್ರೀ ಕ್ಷೇತ್ರ ಮೈಲಾರ ಮಲ್ಲಣ್ಣಾ (ಖಂಡೊಬಾ) ದೇವಸ್ಥಾನ, ಬೀದರ್ ನಗರದ ಮಂಗಳಪೇಟೆಯ ಭವಾನಿ ಮಂದಿರಗಳಿಗೆ ಹಾಗೂ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ತಂದೆ ತಾಯಿಯರ ಗದ್ದುಗೆಗಳಿಗೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
59 ಕೆ.ಜಿ ತೂಕದ ಕೇಕ್ ತಂದಿದ್ದ ಮುನ್ನಾ ಕೋಟೆ:
ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರ ಜನ್ಮ ದಿನದ ನಿಮಿತ್ಯವಾಗಿ ಯುವಜನತಾದಳದ ರಾಜ್ಯ ಕಾರ್ಯದರ್ಶಿ ಪ್ರವೀಣ್ ಸಾಗರ್ ಕೋಟೆ (ಮುನ್ನಾ ಕೋಟೆ)ರವರು 59 ಕೆ.ಜಿ ತೂಕದ ಕೇಕ್ ತಂದು ಶುಭ ಕೋರಿದರು. ಅನೇಕ ಜನ ಮುಖಂಡರು, ಕಾರ್ಯಕರ್ತರು ವಿಶೇಷ ಉಡುಗೊರೆಗಳು, ಬೃಹತ್ ಗಾತ್ರದ ಹಾರಗಳೊಂದಿಗೆ ಮಾಜಿ ಸಚಿವರು, ಮಾಜಿ ಶಾಸಕರಾದ ಬಂಡೆಪ್ಪ ಖಾಶೆಂಪುರ್ ರವರ ಜನ್ಮದಿನಕ್ಕೆ ಶುಭ ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















