ಕಲ್ಪ ಮೀಡಿಯಾ ಹೌಸ್ | ಬೀದರ್ |
ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ (102) #Bhimanna Khandre ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡುಬಂದಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ ಕೊನೆಯುಸಿರೆಳೆದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ತಂದೆ ಭೀಮಣ್ಣ ಖಂಡ್ರೆ ಅವರು ನಿರಂತರವಾಗಿ ಆರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿದ್ದು, ಅನೇಕ ಜನಪರ ಕಾರ್ಯಗಳು ಕೈಗೊಳ್ಳುವ ಮೂಲಕ ಹೆಸರುವಾಸಿಯಾಗಿದ್ದರು. 1936ರಲ್ಲಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದರು. ಇದರಡಿ ವಿವಿಧ ಶಾಲಾ-ಕಾಲೇಜು ತೆರೆದು ಗಡಿ ಜಿಲ್ಲೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗಿದೆ. ಕಬ್ಬಿಗೆ ಸೂಕ್ತ ಬೆಲೆ ಸಿಗದ ಸಂದರ್ಭದಲ್ಲಿ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ, ಮಹಾತ್ಮ ಗಾಂಧಿ ಸಕ್ಕರೆ ಕಾರ್ಖಾನೆಗೆ ಶಕ್ತಿ ತುಂಬಿ ರೈತರಿಗೆ ಅನುಕೂಲ ಮಾಡಿಕೊಡುವಲ್ಲಿ ಭೀಮಣ್ಣ ಖಂಡ್ರೆ ಪ್ರಮುಖ ಪಾತ್ರ ವಹಿಸಿದ್ದರು.
ಗಣ್ಯರ ಸಂತಾಪ
ಶತಾಯುಷಿಗಳ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















