ಕಲ್ಪ ಮೀಡಿಯಾ ಹೌಸ್ | ಬೀದರ್ |
ಗ್ರಾಮೀಣ ಪ್ರದೇಶಗಳಲ್ಲಿ ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸಬೇಕಾದರೆ ರಸ್ತೆ, ಮೂಲಭೂತ ಸೌಕರ್ಯಗಳನ್ನ ಒದಗಿಸುವುದು ಬಹಳ ಅಗತ್ಯವಾಗುತ್ತದೆ ಹೀಗಾಗಿ ಪ್ರತಿಯೊಂದು ಗ್ರಾಮದಲ್ಲಿ ಹೆಚ್ಚಿನ ಗಮನಹರಿಸಿ ಕೆಲಸ ಮಾಡಲಾಗುತ್ತಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ MLA Shailendra Beldale ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಗ್ರಾಮದಲ್ಲಿ ಮುಖ್ಯರಸ್ತೆ ಯಿಂದ ಗ್ರಾಮದಲ್ಲಿ ಕೆಕೆಆರ್‌ಡಿಬಿ ಅನುದಾನದಡಿಯ 1 ಕೋಟಿ ರೂ. ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಶಾಲೆಗೆ ಹೋಗಲು, ಜನರು ದಿನಗೂಲಿಗಾಗಿ ಹಳ್ಳಿಯಿಂದ ನಗರಕ್ಕೆ ಬರಲು ಅಥವಾ ರೋಗಿಗಳು ಆಸ್ಪತ್ರೆಗೆ ಹೋಗಲು, ಇವೆಲ್ಲಕ್ಕೂ ಉತ್ತಮ ರಸ್ತೆಗಳ ಅತಿ ಅವಶ್ಯಕವಾಗಿರುತ್ತವೆ ಹೀಗಾಗಿ ಗುಣಮಟ್ಟದ ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
ಈ ರಸ್ತೆಯಿಂದ ದಿನನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ನಿತ್ಯದ ಸಂಚಾರಕ್ಕೆ ತುಂಬಾ ತೊಂದರೆಯಾಗಿತಿತ್ತು ಪ್ರತೀ ವರ್ಷ ಮಳೆಗಾಲದಲ್ಲಿ ದೊಡ್ಡ ಗುಂಡಿಗಳು ಬೀಳುತ್ತಿದ್ದವು ಈ ಗ್ರಾಮದಲ್ಲಿ ನಡೆಯುವ ವಿವಿಧ ಕಾರ್ಯಕ್ರಮ ಮತ್ತು ಉತ್ಸವಕ್ಕೆ ನಾನು ಆಗಮಿಸಿದಾಗ ಜನರು ಈ ರಸ್ತೆ ಕುರಿತು ಮನವಿ ಮಾಡಿದ್ದರೂ ಇದೀಗ ಮತದಾರರ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾದ ಬಳಿಕ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಗುತ್ತಿಗೆದಾರರು ಗ್ರಾಮದಲ್ಲಿ ಸಮಯಬದ್ಧವಾಗಿ ಕಾಮಗಾರಿಯನ್ನು ಉತ್ತಮವಾಗಿ ಪೂರ್ಣ ಗೋಳಿಸಬೇಕು ಅಧಿಕಾರಿಗಳು ಸಹ ಕಾಮಗಾರಿ ಕಡೆ ಹೆಚ್ಚಿನ ನಿಗಾ ವಹಿಸಿ ಕಾಮಗಾರಿ ಗುಣಮಟ್ಟ ನೋಡಿಕೊಳ್ಳಬೇಕು ಮತ್ತು ಜನರು ಸಹ ಉತ್ತಮವಾಗಿ ಕಾಮಗಾರಿ ಪೂರ್ಣಗೊಳ್ಳುವರೆಗು ಸಹಕಾರ ನೀಡಬೇಕು ಎಂದರು.
ಗ್ರಾಮದಲ್ಲಿ ಎಲ್ಲಾ ಸಮಾಜದ ಜನರು ಒಗ್ಗಟ್ಟಿನಿಂದ ಜೀವನ ನಡೆಸಬೇಕು ಸಣ್ಣ ಸಣ್ಣ ಭಿನ್ನಾಭಿಪ್ರಾಯಗಳಿದ್ದರೆ ಗ್ರಾಮದ ಹಿರಿಯರ ಸಮ್ಮುಕದಲ್ಲಿ ಬಗೆಹರಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಕಾಶಿಬಾಯಿ, ಉಪಾಧ್ಯಕ್ಷರಾದ ಅಬ್ದುಲ್ ಸಮದ್, ಸುರೇಶ ಮಾಶೆಟ್ಟಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಾಬುರಾವ ಮಲ್ಕಾಪುರೆ, ಅನೀಲಕುಮಾರ ಪನ್ನಾಳೆ, ದೀಪಕ ಮನ್ನಳ್ಳಿ, ಚಂದ್ರಶೇಖರ್ ಮಡಕಿ, ಚಂದ್ರಶೇಖರ್ ಪಾಟೀಲ, ಎನ್ ಎ ಖಾದರಿ, ಎಂಡಿ ಖಾಲಿಕ, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post